ಶಿಡ್ಲಘಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

- Advertisement -
- Advertisement -

ಶ್ರೀಕೃಷ್ಣ ಭರತಖಂಡದ ಐಕ್ಯತೆಗಾಗಿ ಶ್ರಮಿಸಿದ ಮಹಾನುಭಾವ. ಶ್ರೀಕೃಷ್ಣ ಯಾವುದೇ ರಾಜ್ಯದ ರಾಜನಾಗದಿದ್ದರೂ ದೇಶದಲ್ಲಿದ್ದ ಆಗಿನ ಎಲ್ಲಾ ರಾಜರಿಂದಲೂ ಪೂಜಿಸಿಕೊಂಡಥಹ ಶ್ರೇಷ್ಠ ವ್ಯಕ್ತಿ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಅಗ್ನಿಶಾಮಕ ಠಾಣೆ ಆವರಣದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ಧರ್ಮದ ಸ್ಥಾಪನೆಗಾಗಿ ಅಧರ್ಮದ ಹಾದಿಯಲ್ಲಿದ್ದವರನ್ನೆಲ್ಲಾ ನಾಶ ಮಾಡಿ, ಜಗತ್ತಿಗೆ ಗೀತೆಯನ್ನು ನೀಡಿ ಬದುಕುವ ಮಾರ್ಗವನ್ನು ತಿಳಿಸಿಕೊಟ್ಟಿದ್ದಾರೆ. ಶ್ರೀಕೃಷ್ಣ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಮನುಕುಲಕ್ಕೇ ಸೇರುವಂಥಹ ಶ್ರೇಷ್ಠ ವ್ಯಕ್ತಿತ್ವ. ಗೀತೆಯ ಸಾರವನ್ನು ಜನಸಾಮಾನ್ಯರಿಗೆ ತಲುಪಿಸುವುದು ಮತ್ತು ಅದನ್ನು ಅಳವಡಿಸಿಕೊಳ್ಳುವುದು ಸಮಾಜದ ಏಳಿಗೆಗೆ ಅತ್ಯಗತ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರತಿಭಾವಂತ ಯಾದವ ಕುಲದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಡಾ.ಡಿ.ಟಿ.ಸತ್ಯನಾರಾಯಣರಾವ್‌ ಶ್ರೀಕೃಷ್ಣನ ಕುರಿತು ಮಾತನಾಡಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಲ್ಲಕ್ಕಿಗಳ ತಂಡದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ತಹಶೀಲ್ದಾರ್‌ ಅಜಿತ್‌ಕುಮಾರ್‌ರೈ, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಕೆ.ಕೇಶವಮೂರ್ತಿ, ಗೌರವಾಧ್ಯಕ್ಷ ಟಿ.ಕೆ.ನಟರಾಜ್‌, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಬಂಕ್‌ ಮುನಿಯಪ್ಪ, ತನುಜಾ ರಘು, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಸುರೇಶ್‌, ಎಪಿಎಂಸಿ ನಿರ್ದೇಶಕ ಡಿ.ವಿ.ವೆಂಕಟೇಶ್‌, ರಾಮಕೃಷ್ಣಪ್ಪ, ರಾಮಚಂದ್ರಪ್ಪ, ಎನ್‌.ಲಕ್ಷ್ಮಣ, ಎಸ್‌.ಎ.ನಾರಾಯಣಸ್ವಾಮಿ, ಎಂ.ನಾಗರಾಜ್‌, ಕೆ.ಕೃಷ್ಣಪ್ಪ, ದೊಡ್ಡಪಾಪಣ್ಣ, ಶ್ರೀನಿವಾಸ್‌, ಬ್ರಹ್ಮಾನಂದರೆಡ್ಡಿ, ಅಶ್ವತ್ಥಪ್ಪ ಹಾಜರಿದ್ದರು.
[highlight bgcolor=”#f7e9c3″]
ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು.
ಯಾದವ ಕುಲಸ್ಥರು ಕುಟುಂಬ ಸಮೇತರಾಗಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆಯನ್ನು ನೆರವೇರಿಸಿದರು.
ತಾಲ್ಲೂಕಿನ ಯಾದವ ಕುಲಸ್ಥರಿಂದ ಕುದುರೆ ರಥ, ಹೂ ಪಲ್ಲಕ್ಕಿಗಳ ಮೆರವಣಿಗೆಯನ್ನು ಆಯೋಜಿಸಿದ್ದು, ಶ್ರೀಕೃಷ್ಣ ಮೂರ್ತಿಗಳಿರುವ ಮುತ್ತಿನ ಪಲ್ಲಕ್ಕಿಗಳು, ಸಪ್ತಾಶ್ವದ ರಥಗಳು, ಕೀಲುಕುದುರೆ, ಗಾರ್ಡಿಬೊಂಬೆ, ನವಿಲುಬೊಂಬೆ, ತಮಟೆ ವಾದನ, ನಾದಸ್ವರ, ಶ್ರೀಕೃಷ್ಣ ವೇಷಧಾರಿಗಳಾದ ಮಕ್ಕಳು, ದೀಪಗಳನ್ನು ಹೊತ್ತ ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು ಆಕರ್ಷಕವಾಗಿತ್ತು.
[/highlight]

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!