ಶಿಡ್ಲಘಟ್ಟದ ‘ಊರದೇವರು’, ಪುರಾತನ ಪ್ರಸಿದ್ಧ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ

- Advertisement -
- Advertisement -

ನಗರದ ಪುರಾತನ ಪ್ರಸಿದ್ಧ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ನಡೆಯಿತು. ‘ಊರದೇವರು’ ಎಂದೇ ಪ್ರಸಿದ್ಧ­ವಾದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿ­ಯಲ್ಲಿ ಕೈಗೊಳ್ಳಲಾಯಿತು.
ದೇಗು­ಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಶಾಸಕ ಎಂ.ರಾಜಣ್ಣ ಮತ್ತು ಗ್ರೇಡ್‌ 2 ತಹಶೀಲ್ದಾರ್‌ ಮುನಿಕೃಷ್ಣಪ್ಪ ರಥೋತ್ಸವಕ್ಕೆ ಚಾಲನೆ ನೀಡಿ­ದರು. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡ­­ಲಾಯಿತು. ಮಹಿಳೆಯರು ತೆಂಗಿನಕಾಯಿ ಒಡೆದು, ಪೂಜೆ ಸಲ್ಲಿಸಿ, ಆರತಿ ಮಾಡಿದರು. ಮಯೂರ ವೃತ್ತ­ದಲ್ಲಿ ಪಾನಕ ಮತ್ತು ಹೆಸರುಬೇಳೆ ಕೋಸಂಬರಿ ಹಂಚಲಾಯಿತು.
ಈ ಹಿಂದೆ ಅಶೋಕ ರಸ್ತೆಯು ಕಿರಿ­ದಾಗಿತ್ತು. ಆ ಕಾರಣಕ್ಕೆ ದೊಡ್ಡದಾದ ಬ್ರಹ್ಮ ರಥವನ್ನು ರಸ್ತೆ ಕೊನೆಯಲ್ಲಿ ತಿರು­ಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ದೇವರನ್ನೇ ತಿರುಗಿಸಿ ರಥವನ್ನು ಹಿಂಬದಿ­ಯಿಂದ ಎಳೆದು ತರಲಾಗುತ್ತಿತ್ತು. ಹೀಗಾಗಿ ‘ಶಿಡ್ಲಘಟ್ಟ ದೇವರು ಹಿಂದು­ಮುಂದು’ ಎಂಬ ಮಾತು ಚಾಲ್ತಿ­ಗೆ ಬಂದಿತು ಎಂದು ಭಕ್ತರೊಬ್ಬರು ನೆನಪಿಸಿ­ಕೊಂಡರು.
ವೇಣುಗೋಪಾಲಸ್ವಾಮಿ ದೇಗುಲ­ದಲ್ಲಿ ಸೋಮವಾರದಿಂದ ಪ್ರಾರಂಭ­ವಾದ ಪೂಜಾ ಕಾರ್ಯಕ್ರಮಗಳು ವಾರದ ಕಾಲ ನಡೆಯಲಿದ್ದು, ನಗರದ ಎಲ್ಲ ಜಾತಿಯವರೂ ವಿವಿಧ ಕೈಂಕರ್ಯ­ಗಳಲ್ಲಿ ಭಾಗಿಯಾಗುವುದು ವಿಶೇಷ­ವಾಗಿದೆ.
ನಗರಸಭೆ ಆಯುಕ್ತ ಚಲಪತಿ, ದೇಗುಲ ಸಮಿತಿ ಸಂಚಾಲಕ ರೂಪಸಿ ರಮೇಶ್‌, ಅರ್ಚಕ ವೈ.ಎನ್‌.ದಾಶರಥಿಭಟ್ಟಾಚಾರ್ಯ, ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಬಿ.ಪಿ.ರಾಘವೇಂದ್ರ, ಬಾಲಕೃಷ್ಣ, ಬಂಗಾರು ಶ್ರೀನಿವಾಸ್‌ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!