Home News ಶಿಡ್ಲಘಟ್ಟ ಸಾರ್ವಜನಿಕ ಗ್ರಂಥಾಲಯದಲ್ಲಿ ಗ್ರಂಥಾಲಯ ದಿನ ಆಚರಣೆ

ಶಿಡ್ಲಘಟ್ಟ ಸಾರ್ವಜನಿಕ ಗ್ರಂಥಾಲಯದಲ್ಲಿ ಗ್ರಂಥಾಲಯ ದಿನ ಆಚರಣೆ

0

ಸಾರ್ವಜನಿಕ ಗ್ರಂಥಾಲಯದಲ್ಲಿ ಭಾನುವಾರ ಗ್ರಂಥಾಲಯ ದಿನದ ಅಂಗವಾಗಿ ಡಾ.ಎಸ್‌.ಆರ್‌.ರಂಗನಾಥನ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗ್ರಂಥಪಾಲಕ ಬಚ್ಚರೆಡ್ಡಿ ಮಾತನಾಡಿದರು.
ಗ್ರಂಥಾಲಯದ ಪಿತಾಮಹ ಎಂದೇ ಖ್ಯಾತರಾದ ಡಾ.ಎಸ್‌.ಆರ್‌.ರಂಗನಾಥನ್‌ ಗ್ರಂಥಪಾಲನೆ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಇಂದು ಭಾರತೀಯ ಗ್ರಂಥಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಮಾಜದಲ್ಲಿರುವ ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಮೂಲಕ ಜ್ಞಾನರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು. ಸಾರ್ವಜನಿಕ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಪುಸ್ತಕಗಳಿವೆ. ಒಟ್ಟಾರೆ ಸುಮಾರು ಮುವ್ವತ್ತು ಸಾವಿರ ಪುಸ್ತಕಗಳಿವೆ ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ ಓದುಗರು ಹೆಚ್ಚಾಗಬೇಕು ಪುಸ್ತಕಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಗ್ರಂಥಾಲಯದಲ್ಲಿ ಪ್ರತಿನಿತ್ಯ 28 ದಿನ ಪತ್ರಿಕೆಗಳು, 15ಕ್ಕೂ ಹೆಚ್ಚು ವಾರ ಮತ್ತು ಮಾಸಪತ್ರಿಕೆಗಳನ್ನು ತರಿಸುತ್ತೇವೆ ಗ್ರಂಥಾಲಯದ ಸದಸ್ಯರ ಸಂಖ್ಯೆ ಹೆಚ್ಚಾಗಬೇಕಿದೆ ನಾಗರಿಕರು ಈ ನಿಟ್ಟಿನಲ್ಲಿ ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಗ್ರಂಥಾಲಯ ಸಹಾಯಕಿ ಬಾಂಧವ್ಯ ಹಾಗೂ ಓದುಗರು ಉಪಸ್ಥಿತರಿದ್ದರು.

error: Content is protected !!