ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸರ್ಕಾರದಿಂದ ಬಿಡುಗಡೆಯಾಗುತ್ತಿರುವ ಕೋಟ್ಯಾಂತರ ರೂಪಾಯಿಗಳ ಅನುದಾನ ನಿಯಮಾನುಸಾರವಾಗಿ ಖರ್ಚು ಮಾಡುವುದರ ಬದಲಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿ ಹಣವನ್ನು ದುರುಪಯೋಗ ಮಾಡಿರುವ ಬಗ್ಗೆ ಅನುಮಾನಗಳಿದ್ದು, ಅದನ್ನು ತನಿಖೆಯಾಗಬೇಕು ಎಂದು ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ತರಬಹಳ್ಳಿ ಬಾಸ್ಕರರೆಡ್ಡಿ ಆರೋಪಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೋಟ್ಯಾಂತರ ರೂಪಾಯಿಗಳ ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಬಿಡುಗಡೆ ಮಾಡಿ, ಈ ಅನುದಾನವನ್ನು ಸಮರ್ಪಕವಾಗಿ ಖರ್ಚು ಮಾಡಲು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಇಲ್ಲಿ ಇ ಟೆಂಡರ್ ಕರೆಯುವ ಮೂಲಕ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು.
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈ ಎಲ್ಲಾ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮ್ಯಾನುಯಲ್ ಟೆಂಡರ್ ಕರೆದು ಕಾಮಗಾರಿಗಳನ್ನು ಮಾಡಿದ್ದಾರೆ. ಅನೇಕ ಕಡೆಗಳಲ್ಲಿ ಕಾಮಗಾರಿಗಳನ್ನೆ ಮಾಡಿಲ್ಲ. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಾಮಗಾರಿಗಳನ್ನು ಹಂಚಿಕೆ ಮಾಡಿಕೊಂಡಿದ್ದಾರೆ. ಇದರಿಂದ ಕೋಟ್ಯಾಂತರ ರೂಪಾಯಿಗಳ ಸರ್ಕಾರದ ಹಣ ದುರ್ಬಳಕೆಯಾಗಿರುವ ಅನುಮಾನಗಳಿದ್ದು ತನಿಖೆ ನಡೆಸುವಂತೆ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದ್ದೇವೆ. ಒಂದು ವೇಳೆ ಪಾರದರ್ಶಕವಾದ ತನಿಖೆಯಾಗದಿದ್ದಲ್ಲಿ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ಸಲ್ಲಿಸಿ ತನಿಖೆಗೆ ಮನವಿ ಮಾಡುತ್ತೇವೆ ಎಂದರು.
ಬಿಜೆಪಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ.ನಂದೀಶ್ ಮುಖಂಡರಾದ ಮುನಿರಾಜು, ದಾಮೋದರ್, ಕೆಂಪರೆಡ್ಡಿ, ದೊಣ್ಣಹಳ್ಳಿ ರಾಮಣ್ಣ, ರಾಮಕೃಷ್ಣಪ್ಪ ಹಾಜರಿದ್ದರು.
- Advertisement -
- Advertisement -
- Advertisement -