ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗು ಪರಿಶಿಷ್ಟ ಜಾತಿ ಹಾಗು ಪಂಗಡದ ಜನಾಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್‍ಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ಹಾಕಿರುವ ಸುಮಿತ್‍ಗೌಡನನ್ನು ಬಂಧಿಸಿ ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿ ದಲಿತಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಸೀಲ್ದಾರ್‍ರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಶನಿವಾರ ಜಮಾಯಿಸಿದ ದಲಿತ ಸೇನೆ ಪದಾಧಿಕಾರಿಗಳು ನಗರದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ಮೂಲಕ ಕಿಡಿಗೇಡಿ ಸುಮಿತ್‍ಗೌಡ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ಈ ದೇಶದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಮಾತಾಡಿರುವುದಷ್ಟೇ ಅಲ್ಲದೇ ಈ ದೇಶದ ಮಹಿಳೆಯ ಬಗ್ಗೆ ಕೀಳಾಗಿ ಮಾತನಾಡುವ ಇಂತಹ ದೇಶದ್ರೋಹಿಯನ್ನು ಕೂಡಲೇ ಬಂಧಿಸಿ ಗಡೀಪಾರು ಮಾಡಬೇಕು ಎಂದು ಒತ್ತಾಯಿಸಿ ತಾಲೂಕು ಕಚೇರಿ ಮುಂಭಾಗದಲ್ಲಿ ಕಿಡಿಗೇಡಿ ಸುಮಿತ್‍ಗೌಡನ ಪ್ರತಿಕೃತಿ ದಹಿಸಿ ತಹಸೀಲ್ದಾರ್ ಎಸ್.ಅಜಿತ್‍ಕುಮಾರ್ ರೈ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಅಜಿತ್‍ಕುಮಾರ್ ರೈ ಕೂಡಲೇ ಮನವಿ ಪತ್ರವನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು.
ದಲಿತಸೇನೆಯ ಈಧರೆಪ್ರಕಾಶ್, ಮುನಿಕೃಷ್ಣಪ್ಪ, ನರಸಿಂಹ, ಕೃಷ್ಣಪ್ಪ, ಕೃಷ್ಣಮೂರ್ತಿ, ಗಂಗಾಧರ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -