ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ರಾಜ್ಯ ಅಕ್ಷರ ದಾಸೋಹ ನೌಕರರಿಂದ ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಏಳನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ಈ ನೌಕರರಿಗೂ ಕನಿಷ್ಠ ಕೂಲಿ ನೀಡಬೇಕು. ನಾಲ್ಕನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು. ಹಿಂದಿನ ಸರ್ಕಾರ ಘೋಷಣೆ ಮಾಡಿದ ಹೆಚ್ಚುವರಿ ಸಂಭಾವನೆಯನ್ನು ಇಂದಿನ ಸರ್ಕಾರ ಜಾರಿಗೊಳಿಸಬೇಕು. 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು. ಅಡುಗೆ ಮಾಡುವಾಗ ಸಂಭವಿಸುವ ಅಪಘಾತ ಮೊತ್ತವನ್ನು ಹೆಚ್ಚಿಸಬೇಕು. ಐಸಿಡಿಎಸ್ ಯೋಜನೆಗೆ ಕಡಿತ ಮಾಡಿದ ಅನುದಾನವನ್ನು ಕೇಂದ್ರ ಸರ್ಕಾರ ವಾಪಸ್ ಮಾಡಬೇಕು. ಐಸಿಡಿಎಸ್ ಯೋಜನೆಯನ್ನು ಬಲಿಷ್ಠಗೊಳಿಸಬೇಕು. ಕನಿಷ್ಠ ವೇತನ ಮತ್ತು ನಿವೃತ್ತಿ ಸೌಲಭ್ಯ ನೀಡಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ಬೀದಿಗಳಲ್ಲಿ ಸಾಗಿ ತಾಲ್ಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ಸಿ.ಐ.ಟಿ.ಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಮುನಿಲಕ್ಷ್ಮಮ್ಮ, ಎಸ್.ಎಂ.ಮಂಜುಳಾ, ಎಂ.ಆರ್.ಗೀತಾ, ಅಶ್ವತ್ಥಮ್ಮ, ಗುಲ್ಜಾರ್, ಟಿ.ಮಂಜುಳಮ್ಮ, ಫಯಾಜುಲ್ಲಾ, ಖಲೀಲ್, ನರಸಿಂಹಪ್ಪ, ವೆಂಕಟರಮಣಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- Advertisement -
- Advertisement -
- Advertisement -