22 C
Sidlaghatta
Saturday, October 11, 2025

ಹೈನುಗಾರಿಕೆ ಕ್ಷೇತ್ರವನ್ನು ಬಲಪಡಿಸಿ

- Advertisement -
- Advertisement -

ಅತ್ಯಂತ ಕಡಿಮೆ ಬೆಲೆಗೆ ಜನ ಸಾಮಾನ್ಯರ ಕೈಗೆಟಕುವಂತೆ ತಯಾರಿಸಿರುವ ನಂದಿನಿ ಹಾಲಿನ ಉತ್ಪನ್ನಗಳನ್ನು ಖರೀದಿಸುವುದರಿಂದ ಈ ಭಾಗದ ಹೈನುಗಾರಿಕೆ ಕ್ಷೇತ್ರ ಮತ್ತು ರೈತರನ್ನು ಸಹ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಶಾಸಕ ಎಂ.ರಾಜಣ್ಣ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ಆವರಣದಲ್ಲಿ ಬುಧವಾರ ನೂತನವಾಗಿ ನಿರ್ಮಿಸಲಾಗಿರುವ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಾರುಕಟ್ಟೆಯಲ್ಲಿ ನಾನಾ ಬಗೆಯ ಉತ್ಪನ್ನಗಳು ಬಣ್ಣ ಬಣ್ಣದ ಪ್ಯಾಕೇಟ್‌ಗಳಲ್ಲಿ ಲಭ್ಯ ಇವೆ. ಆದರೆ ಅವುಗಳನ್ನು ಲಾಭದ ದೃಷ್ಟಿಯಿಂದಷ್ಟೇ ಉತ್ಪಾದಿಸಿದ್ದು ಅವುಗಳನ್ನು ಖರೀದಿಸಿ ಸೇವಿಸುವುದರಿಂದ ತಾತ್ಕಾಲಿಕವಾಗಿ ನಾಲಿಗೆಗೆ ರುಚಿ ಸಿಗಬಹುದು. ಆದರೆ ಅವುಗಳು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್) ದಿಂದ ನಂದಿನಿ ಹಾಲಿನ ಉತ್ಪನ್ನಗಳನ್ನು ಎಲ್ಲಾ ವಯೋಮಾನದ ಜನರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ತಯಾರಿಸಲಾಗುತ್ತಿದೆಯೆ ಹೊರತು ಲಾಭದ ದೃಷ್ಟಿಯಿಂದಲ್ಲ ಎಂದರು. ನಂದಿನಿ ಹಾಲಿನ ಉತ್ಪನ್ನಗಳು ಅಂತರಾಷ್ಟ್ರೀಯ ಮಟ್ಟದ ಗುಣಮಟ್ಟ ಹೊಂದಿದ್ದು ರುಚಿ, ಶುಚಿಯಾಗಿಯೂ ಇರುತ್ತದೆಯಲ್ಲದೆ ಜನರ ಆರೋಗ್ಯದ ದೃಷ್ಟಿಯಿಂದ ನಂದಿನಿ ಉತ್ಪನ್ನಗಳ ಸೇವನೆ ಬಹಳ ಮುಖ್ಯ ಎಂದು ಹೇಳಿದರು.
ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ನಂದಿನಿ ಹಾಲು, ಮಜ್ಜಿಗೆ, ಮೊಸರು, ಪೇಡ ಇನ್ನಿತರೆ ಉತ್ಪನ್ನಗಳು ಬಹಳ ಕಡಿಮೆ ಬೆಲೆಗೆ ಇಲ್ಲಿ ಸಿಗಲಿವೆ. ಇವುಗಳನ್ನು ಖರೀದಿಸುವುದರಿಂದ ನಾವು ಹೈನುಗಾರಿಕೆಯನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಬೇರೆ ಬೇರೆ ಬ್ರಾಂಡ್‌ಗಳ ವಸ್ತುಗಳಿಗಿಂತಲೂ ನಂದಿನಿ ಬ್ರಾಂಡ್‌ನ ಉತ್ಪನ್ನಗಳು ಆರೋಗ್ಯ ಹಾಗೂ ಬೆಲೆ ದೃಷ್ಟಿಯಿಂದಲೂ ಉತ್ತಮವಾಗಿದ್ದು ನಂದಿನಿ ಉತ್ಪನ್ನಗಳನ್ನು ಖರೀದಿಸಿ ಸಹಕಾರ ಕ್ಷೇತ್ರ ಹಾಗು ಈ ಭಾಗದ ರೈತರ ಆರ್ಥಿಕ ಬೆಳವಣಿಗೆಗೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಮಾರುಕಟ್ಟೆ ಉಪ ವ್ಯವಸ್ಥಾಪಕ ರತ್ನಯ್ಯಶೆಟ್ಟಿ, ಸ್ಥಳೀಯ ಶಿಬಿರ ಘಟಕದ ವ್ಯವಸ್ಥಾಪಕ ಹನುಮಂತರಾವ್, ನಂದಿನಿ ಮಾರಾಟ ಮಳಿಗೆಯ ಮಾಲೀಕ ಮುನಿರೆಡ್ಡಿ, ಕದಿರಿ ಯೂಸುಫ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!