Home News 112 ಸಹಾಯವಾಣಿ ಸಂಖ್ಯೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

112 ಸಹಾಯವಾಣಿ ಸಂಖ್ಯೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

0

ನಗರದ ಬಸ್ ನಿಲ್ದಾಣದ ಬಳಿ ಬುಧವಾರ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಾಗೂ ಪೊಲೀಸರ ಸಂಪರ್ಕಕ್ಕಾಗಿ ಹೊಸದಾಗಿ ಜಾರಿಗೆ ಬಂದಿರುವ 112 ಸಹಾಯವಾಣಿ ಸಂಖ್ಯೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸತೀಶ್ ಮಾತನಾಡಿದರು.

ಕೋವಿಡ್-19 ಸೋಂಕು ತಡೆಗೆ ಕಡ್ಡಾಯವಾಗಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್‌ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ನಿಯಮಿತವಾಗಿ ಕೈ-ಬಾಯಿ ಸ್ವಚ್ಛತೆ ಹಾಗೂ ಸ್ಯಾನಿಟೈಸರ್ ಮಾಡಿಕೊಳ್ಳುವಂತೆ ಅವರು ತಿಳಿಸಿದರು.

 ಒಂದೇ ಭಾರತ ಒಂದೇ ತುರ್ತು ಕರೆ ಪರಿಕಲ್ಪನೆಯ ತುರ್ತು ಸ್ಪಂದನಾ ಬೆಂಬಲ ವ್ಯವಸ್ಥೆಯನ್ನು ಕೇಂದ್ರ ಗೃಹ ಇಲಾಖೆ ಜಾರಿಗೆ ತಂದಿದೆ. ಸಾರ್ವಜನಿಕರು ತುರ್ತು ಕರೆಗಾಗಿ ಪೊಲೀಸ್ ನೆರವು ಪಡೆಯಲು 112 ಸಂಖ್ಯೆಗೆ ಡಯಲ್ ಮಾಡಲು ಮನವಿ ಮಾಡಿಕೊಂಡರು.

 ಪೊಲೀಸ್ ನೆರವು, ಅಗ್ನಿಶಾಮಕದಳದ ನೆರವು ಅಥವಾ ಅಂಬ್ಯುಲೆನ್ಸ್ ಸೇವೆ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು (ಇಆರ್‍ಎಸ್‍ಎಸ್) ಎಮೆರ್ಜೆನ್ಸಿ ರಸ್ಪಾನ್ಸ್ ಸಪೋರ್ಟ್ ಸಿಸ್ಟಂ ವ್ಯವಸ್ಥೆಯಡಿ ಎಲ್ಲಿಂದಲೇ ಕರೆ ಬಂದರೂ ತುರ್ತಾಗಿ ಅಲ್ಲಿಗೆ ತಲುಪಿಸಿ ರಕ್ಷಣೆ ಒದಗಿಸಲು ಅನುಕೂಲವಾಗಲಿದೆ. 112ಕ್ಕೆ ಕರೆ ಮಾಡಿದರೆ ನೇರವಾಗಿ ಬೆಂಗಳೂರಿನಿಂದ ಏಕಿಕೃತ ತುರ್ತು ಸ್ಪಂದನಾ ಕೇಂದ್ರದ ಮೂಲಕ ಜಿಲ್ಲಾ ಸಮನ್ವಯ ಕೇಂದ್ರಕ್ಕೆ ಸಂಪರ್ಕಿಸಲಾಗುತ್ತದೆ. ಕರೆ ಸ್ವೀಕರಿಸಿದ ತಕ್ಷಣ ಘಟನಾ ಸ್ಥಳಕ್ಕೆ 15 ರಿಂದ 17 ನಿಮಿಷದಲ್ಲಿ ವಾಹನ ಅಲ್ಲಿಗೆ ತಲುಪುತ್ತದೆ ಎಂದು ತಿಳಿಸಿದರು.

ಎ.ಎಸ್.ಐ ನವಾಜ್ ಅಹಮದ್, ಮುಖ್ಯಪೇದೆ ಮಂಜುನಾಥ ಗುಪ್ತ, ಪೇದೆ ಶಶಿಕುಮಾರ್ ಹಾಜರಿದ್ದರು.

error: Content is protected !!