ಪೂರ್ಣ ಪುಟ · Open full page

11ನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಗತ್ಯ ಸಹಕಾರದ ಭರವಸೆ ನೀಡಿದ ಶಾಸಕ ಬಿ.ಎನ್. ರವಿಕುಮಾರ್

11ನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಗತ್ಯ ಸಹಕಾರದ ಭರವಸೆ ನೀಡಿದ ಶಾಸಕ ಬಿ.ಎನ್. ರವಿಕುಮಾರ್

Sidlaghatta : ಶಿಡ್ಲಘಟ್ಟ ತಾಲ್ಲೂಕಿನಲ್ಲಿ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಅಗತ್ಯ ಸಹಕಾರ ನೀಡುವುದಾಗಿ ಶಾಸಕ ಬಿ.ಎನ್. ರವಿಕುಮಾರ್ ಭರವಸೆ ನೀಡಿದರು.

ತಾಲ್ಲೂಕಿನ ಮೇಲೂರು ಗ್ರಾಮದ ಗೃಹ ಕಚೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಮ್ಮೇಳನ ಆಯೋಜನೆ ಕುರಿತು ಚರ್ಚಿಸಿದ ಅವರು, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಾಹಿತ್ಯ ಸಮ್ಮೇಳನಗಳು ಮಹತ್ವದ ವೇದಿಕೆಗಳಾಗಿವೆ ಎಂದರು.

ಸಮ್ಮೇಳನದ ದಿನಾಂಕವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಚರ್ಚಿಸಿ ನಿಗದಿಪಡಿಸಬೇಕು. ಎಲ್ಲರಿಗೂ ಅನುಕೂಲವಾಗುವ ದಿನಾಂಕ ತಿಳಿಸಿದರೆ, ಸಮ್ಮೇಳನ ಆಯೋಜನೆಗೆ ಸಹಕಾರ ನೀಡುವುದಾಗಿ ತಿಳಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಸರ್ಕಾರ ಅನುದಾನ ಒದಗಿಸಬೇಕು. 2028ರಲ್ಲಿ ರಾಜ್ಯದಲ್ಲಿ ಎನ್‌.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದರೆ, ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ವಿಶೇಷ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಮಾಜಿ ಅಧ್ಯಕ್ಷ ಎಸ್.ವಿ. ನಾಗರಾಜ್ ರಾವ್, ತಾಲ್ಲೂಕು ಮಾಜಿ ಅಧ್ಯಕ್ಷ ವಿ. ಕೃಷ್ಣ, ಕಾರ್ಯದರ್ಶಿ ಟಿ.ಟಿ. ನರಸಿಂಹಪ್ಪ, ಮೇಲೂರು ಮಂಜುನಾಥ್ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಕುರಿತು ಕಸಾಪ ನಡೆಸಿದ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತ ವರದಿಗಳನ್ನು ಓದಿ.

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ

error: Content is protected !!
Exit mobile version