ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ನವೆಂಬರ್ 17ರ ಗುರುವಾರ 63ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ, ತಾಲ್ಲೂಕಿನ ಡಿ.ಸಿ.ಸಿ ಬ್ಯಾಂಕ್, ಪಿ.ಎಲ್.ಡಿ ಬ್ಯಾಂಕ್, ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ಮಹಿಳಾ ಸಹಕಾರ ಸಂಘಗಳು ಹಾಗೂ ತಾಲ್ಲೂಕಿನ ಎಲ್ಲಾ ವಿಧವಾದ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವು ನಡೆಯುತ್ತಿದೆ.
ಸಪ್ತಾಹದ ಧ್ಯೇಯ, ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಘಗಳ ಪಾತ್ರ’ ಮತ್ತು ವಿಷಯವು ‘ಸಹಕಾರ ಸಂಘಗಳ ಮೂಲಕ ಕೌಶಲ್ಯ ಮತ್ತು ಉದ್ಯಮಶೀಲತೆಯನ್ನು ಅಭಿವೃದ್ಧಿ ಪಡಿಸುವುದು’ ಆಗಿದೆ. 63ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಶಾಸಕ ಎಂ.ರಾಜಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ತಾದೂರು ರಮೇಶ್ ವಹಿಸಲಿದ್ದಾರೆ.
- Advertisement -
- Advertisement -
- Advertisement -