21.1 C
Sidlaghatta
Thursday, June 30, 2022

ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

- Advertisement -
- Advertisement -

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ 75 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ಕೋವಿಡ್ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲಾಯಿತು.

 ಧ್ವಜಾರೋಹಣವನ್ನು ಶಾಸಕ ವಿ.ಮುನಿಯಪ್ಪ ಮತ್ತು ತಹಶೀಲ್ದಾರ್ ಬಿ.ಎಸ್.ರಾಜೀವ್ ನೆರವೇರಿಸಿದರು.

 ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳ ಮುಖ್ಯಶಿಕ್ಷಕರು, ಕೋವಿಡ್ ಕೇರ್ ಸೆಂಟರನ್ನಾಗಿ ಮಾಡಿದ್ದ ವಸತಿ ಶಾಲೆಗಳ ಮುಖ್ಯಶಿಕ್ಷಕರು, ಉತ್ತಮ ಸಾಧನೆ ಮಾಡಿದ 5 ಸರ್ಕರಿ ಪೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ ಹೆಚ್ಚು ಅಂಕ ಪಡೆದ 5 ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕೊರೊನಾ ವಾರಿಯರ್ಸ್, ಪಿಡಿಒ ಗಳು, ಕಂದಾಯ ಇಲಾಖೆಯ ಸಿಬ್ಬಂದಿ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ, ನಗರಸಭೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಜಲಗಾರರು, ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನ ಮಾಡಲಾಯಿತು. ರಾಷ್ಟ್ರೀಯ ಹಬ್ಬಗಳಿಗೆ ಸದಾ ಸಹಕಾರ ನೀಡುತ್ತಿದ್ದ ಕ್ರೀಡಾ ಶಿಕ್ಷಕ ಅಗಜಾನನಮೂರ್ತಿ ಅವರನ್ನು ಗೌರವಿಸಲಾಯಿತು.

 ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ನಗರಸಭೆ ಅಧ್ಯಕ್ಷೆ ಸಿ.ಎಂ.ಸುಮಿತ್ರಾ ರಮೇಶ್, ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್, ಸರ್ಕಲ್ ಇನ್ಸ್ ಪೆಕ್ಟರ್ ಧರ್ಮೇಗೌಡ, ನಗರಸಭೆ ಪೌರಾಯುಕ್ತ ಶ್ರೀಕಾಂತ್ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here