ಕೋವಿಡ್‌ನಿಂದ ಮೃತಪಟ್ಟಂತಹವರ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂ ನೆರವು

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯದ ಸಮುದಾಯ ಭವನದಲ್ಲಿ ಸೋಮವಾರ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಸುಮಾರು 3000 ದಿನಸಿ ಕಿಟ್ ವಿತರಣೆ ಮಾಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಎಬಿಡಿ ಟ್ರಸ್ಟ್ ನ ಸಂಸ್ಥಾಪಕ ರಾಜೀವ್‌ಗೌಡ ಮಾತನಾಡಿದರು.

ಸಂಕಷ್ಟದಲ್ಲಿರುವ ಜನರಿಗೆ ತಮ್ಮ ಕೈಲಾದ ಸಹಾಯ ಮಾಡಲು ಎಬಿಡಿ ಗ್ರೂಪ್ಸ್ ಸದಾ ಸಿದ್ದವಾಗಿದೆ. ಯಾರೂ ಸಹ ಹಸಿವಿನಿಂದ ಬಳಲಬಾರದು ಎಂಬ ಒಂದೇ ಉದ್ದೇಶದಿಂದ ತಾಲ್ಲೂಕಿನಾದ್ಯಂತ ಸುಮಾರು ಹದಿನೈದು ಸಾವಿರ ಕಿಟ್ ಆಹಾರ ದಾನ್ಯಗಳ ಕಿಟ್ ವಿತರಿಸುವ ಜೊತೆಗೆ ವೈದ್ಯಕೀಯ ಸೇವೆ ಕಲ್ಪಿಸುವುದು ಸೇರಿದಂತೆ ಕೊರೊನಾ ದಿಂದ ಮೃತ ಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹತ್ತು ಸಾವಿರ ನೀಡಲಾಗುವುದು ಎಂದು ಅವರು ತಿಳಿಸಿದರು.

ವೈದ್ಯಕೀಯ ಸಮಸ್ಯೆ ಇರುವವರು ಟ್ರಸ್ಟ್ ನ ಪದಾಧಿಕಾರಿಗಳನ್ನು ಭೇಟಿ ಮಾಡಿದಲ್ಲಿ ಅಂತಹವರಿಗೆ ಟ್ರಸ್ಟ್ ವತಿಯಿಂದ ಅಗತ್ಯ ಸಹಾಯ ಮಾಡಲಾಗುವದು. ತಾಲ್ಲೂಕಿನ ಜನತೆಯ ಉಪಯೋಗಕ್ಕಾಗಿ ಟ್ರಸ್ಟ್ ವತಿಯಿಂದ ಹತ್ತು ಆಂಬುಲೆನ್ಸ್ ಗಳನ್ನು ಕೊಡುಗೆಯಾಗಿ ನೀಡಲು ಯೋಜನೆ ರೂಪಿಸಿದ್ದು ಆದಷ್ಟು ಬೇಗ ತಾಲ್ಲೂಕಿನ ಜನತೆಗೆ ಆಂಬುಲೆನ್ಸ್ ಸೇವೆ ಕಲ್ಪಿಸಲಾಗುವುದು ಎಂದರು.

 ಎಬಿಡಿ ಟ್ರಸ್ಟ್ ಸದಸ್ಯ ಶ್ರೀನಿವಾಸ್ ಬಾಬು, ಚಲನಚಿತ್ರ ನಟ ಧನುಷ್, ಸ್ಥಳೀಯ ಮುಖಂಡರಾದ ಪ್ರಸನ್ನ, ಸಿ.ಡಿ.ಆಂಜಿನಪ್ಪ, ಶಶಿಧರ್, ಗೊರ‍್ಲಪ್ಪ, ಶ್ರೀಧರ್, ಮುನಿರಾಜು(ಕುಟ್ಟಿ), ಹರೀಶ್, ಭಕ್ತರಹಳ್ಳಿ ಮಂಜುನಾಥ್, ಭಕ್ತರಹಳ್ಳಿ ವಿಶ್ವನಾಥ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!