ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿ.ನಿರ್ಮಲ ಉಪಾಧ್ಯಕ್ಷರಾಗಿ ಆರ್.ನಂದಿನಿ ಆಯ್ಕೆಯಾಗಿದ್ದಾರೆ.
ಒಟ್ಟು 16 ಸದಸ್ಯ ಬಲ ಹೊಂದಿರುವ ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲು ನಿಗದಿಪಡಿಸಲಾಗಿದ್ದು ಸೋಮವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಸಾದಹಳ್ಳಿಯ ಬಿ.ನಿರ್ಮಲ ಹಾಗೂ ತಾತಹಳ್ಳಿಯ ಕೆ.ವೈದೇಹಿ ನಾಮಪತ್ರ ಸಲ್ಲಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಅಬ್ಲೂಡು ಗ್ರಾಮದ ಆರ್.ನಂದಿನಿ ಹಾಗೂ ಶೆಟ್ಟಹಳ್ಳಿಯ ಎನ್.ಗಂಗಮ್ಮ ನಾಮಪತ್ರ ಸಲ್ಲಿಸಿದ್ದರು.
ಬಿ.ನಿರ್ಮಲ 10 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರೆ, ಆರ್.ನಂದಿನಿ 9 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.