ವಕೀಲರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಕನ್ನಡ ಬಳಕೆಗೆ ಆದ್ಯತೆ ನೀಡಲು ಕರೆ

Sidlaghatta : ನಗರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು. ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಅರ್ಪಿಸಿದ ಬಳಿಕ ಸಿಹಿ ಹಂಚಲಾಯಿತು.
ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಮಾತನಾಡಿ, ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಪರಂಪರೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಕನ್ನಡ ನಾಡು, ನುಡಿ, ನೆಲ, ಜಲದ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಹಿರಿಯ ವಕೀಲ ಎಂ. ಪಾಪಿರೆಡ್ಡಿ ಮಾತನಾಡಿ, ಗಡಿಭಾಗಗಳಲ್ಲಿ ಕನ್ನಡ ಭಾಷೆಯ ಬಳಕೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಮನೆ, ಕಚೇರಿ ಹಾಗೂ ನ್ಯಾಯಾಲಯ ಸೇರಿದಂತೆ ಸಾರ್ವಜನಿಕ ವಲಯಗಳಲ್ಲಿ ಕನ್ನಡದ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ವಕೀಲರ ಸಂಘದ ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಇದ್ದರು.
ಸಂಬಂಧಿತ ಸುದ್ದಿ: ವಕೀಲರ ಸುರಕ್ಷತೆಗೆ ಆಗ್ರಹ: ಕಲಾಪದಿಂದ ಹೊರಗುಳಿದು ವಕೀಲರ ಪ್ರತಿಭಟನೆ

For Daily Updates WhatsApp ‘HI’ to 7406303366
Summary in English
The advocates’ association celebrated the 71st Kannada Rajyotsava in a simple event on Monday in the JMFC court premises in Sidlaghatta, with puja and flowers for the Bhuvaneshwari portrait and sweets for all. Association president A. Narayanaswamy urged everyone to respect and protect Kannada language and culture, and senior advocate M. Papireddy said Kannada should get more priority at home, in offices and in courts, as its use in border areas is below expectations.
Be a reporter
ಊರಿನ ಸುದ್ದಿ, ಫೋಟೋ ಕಳುಹಿಸಿ.
Send news



