Home News ಅಂಬೇಡ್ಕರ್ ಅಧ್ಯಯನ ಕೇಂದ್ರ, ಜಗಜೀವನ್ ರಾಮ್ ಭವನಕ್ಕೆ ಅನುದಾನ ಮನವಿ: ಸಚಿವ ಮುನಿಯಪ್ಪ ಸಹಕಾರ ಭರವಸೆ

ಅಂಬೇಡ್ಕರ್ ಅಧ್ಯಯನ ಕೇಂದ್ರ, ಜಗಜೀವನ್ ರಾಮ್ ಭವನಕ್ಕೆ ಅನುದಾನ ಮನವಿ: ಸಚಿವ ಮುನಿಯಪ್ಪ ಸಹಕಾರ ಭರವಸೆ

0
MLA Ravikumar Minister Muniyappa Muttur Temple Event

Sidlaghatta : ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಆದಿಶಕ್ತಿ ಶ್ರೀ ಗಂಗಮ್ಮ ದೇವಾಲಯದ ಕಾರ್ಯಕ್ರಮದಲ್ಲಿ ಶಾಸಕ ಬಿ.ಎನ್. ರವಿಕುಮಾರ್ ಹಾಗೂ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಶನಿವಾರ ಒಂದೇ ವೇದಿಕೆಯಲ್ಲಿ ಭಾಗವಹಿಸಿದ್ದರು.

In English: At a new Adishakti Sri Gangamma temple event in Muttur village, MLA B N Ravikumar requested Social Welfare Minister K H Muniyappa for funds toward Pragati Colony development, a Dr. B R Ambedkar Study Center, and a Babu Jagjivan Ram Bhavan, citing the constituency’s roughly 45,000-strong Scheduled Caste population. The minister assured cooperation and said the government would support house-site allocation for the poor if 1-2 acres of suitable government land is identified locally.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45 ಸಾವಿರ ಪರಿಶಿಷ್ಟ ಜಾತಿಯ ಜನರಿದ್ದು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಗತಿ ಕಾಲೊನಿ ಅಭಿವೃದ್ಧಿ, ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬಾಬು ಜಗಜೀವನ್ ರಾಮ್ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ರವಿಕುಮಾರ್ ಅವರು ಸಚಿವರಲ್ಲಿ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಕೆ.ಎಚ್.ಮುನಿಯಪ್ಪ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರವಿಕುಮಾರ್ ಅವರಿಗೆ ಸಹಾಯ ಮಾಡುವುದಾಗಿ ತಿಳಿಸಿದರು. ಅಲ್ಲದೆ, ಬಡವರಿಗೆ ನಿವೇಶನ ಒದಗಿಸುವ ಉದ್ದೇಶವಿದ್ದರೆ ಒಂದರಿಂದ ಎರಡು ಎಕರೆ ಸರ್ಕಾರಿ ಜಮೀನನ್ನು ಗುರುತಿಸಿ, ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು. ಜಮೀನು ಗುರುತಿಸುವ ಜವಾಬ್ದಾರಿಯನ್ನು ರವಿಕುಮಾರ್ ಹಾಗೂ ಗ್ರಾಮಸ್ಥರು ತೆಗೆದುಕೊಂಡರೆ, ಅಗತ್ಯವಿರುವವರಿಗೆ ನಿವೇಶನ ಕಲ್ಪಿಸಲು ಸರ್ಕಾರದ ವತಿಯಿಂದ ನೆರವು ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರವಿಕುಮಾರ್, ಸಚಿವ ಮುನಿಯಪ್ಪ ಅವರ ರಾಜಕೀಯ ಅನುಭವ ಹಾಗೂ ಹಿರಿಯ ನಾಯಕತ್ವವನ್ನು ಪ್ರಸ್ತಾಪಿಸಿ, “ಏಳು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು ದಕ್ಷಿಣ ಭಾರತದ ಹಿರಿಯ ನಾಯಕರಾಗಿದ್ದಾರೆ. ಭವಿಷ್ಯದಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮೆಲ್ಲರ ಆಶಯ” ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತು ಪ್ರತಿಕ್ರಿಯಿಸಿದ ಮುನಿಯಪ್ಪ, “ಪ್ರಸ್ತುತ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.

For Daily Updates WhatsApp ‘HI’ to 7406303366

error: Content is protected !!
Exit mobile version