
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ನ ಜ್ಞಾನ ಜ್ಯೋತಿ ಶಾಲೆ ಮತ್ತು ಪಿಯು ಕಾಲೇಜಿನ ಮುಖ್ಯ ಶಿಕ್ಷಕ ಎಂ.ಕೆ. ಅಂಜನಾಮೂರ್ತಿ ಅವರಿಗೆ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
In English: M.K. Anjanamurthy, headmaster of Gnana Jyothi School and PU College at Jangamakote Cross, received the Rajiv Gandhi State-level Best Teacher Award in Bengaluru, in recognition of his 30 years of service as a Hindi teacher and headmaster.
ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜ್ಞಾನ ಜ್ಯೋತಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ 30 ವರ್ಷಗಳ ಕಾಲ ಹಿಂದಿ ವಿಷಯ ಬೋಧಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರ ಜೀವಮಾನದ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಕೆ. ಗುಡಿಯಪ್ಪ, ಕಾರ್ಯದರ್ಶಿ ಬಿ.ಎಂ. ರಾಜೀವ್ಕುಮಾರ್, ಪ್ರಾಂಶುಪಾಲೆ ಪಿ. ಮನುಶ್ರೀ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.