ತಾಲ್ಲೂಕಿನ ಕಾಕಚೊಕ್ಕೊಂಡಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ತನುಜಾಕ್ಷಿ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಅನುಪಮಾ ಸೇವಾ ಪ್ರಶಸ್ತಿ ಸಂದಿದೆ.
ಮಹಿಳಾ ದಿನಾಚರನೆಯ ಅಂಗವಾಗಿ 34 ಶೈಕ್ಷಣಿಕ ಜಿಲ್ಲೆಗಳಿಂದಲೂ ಪ್ರಾಥಮಿಕ ಶಿಕ್ಷಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕಿಯರನ್ನು ಗುರ್ತಿಸಿ ಸಂಘವು ಸನ್ಮಾನಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಿಂದ ತನುಜಾಕ್ಷಿ ಅವರಿಗೆ ಪ್ರಶಸ್ತಿ ಸಂದಿದೆ.
ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪಡೆದ ಶಿಕ್ಷಕಿ ತನುಜಾಕ್ಷಿ ಅವರನ್ನು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಬಿಆರ್‌ಸಿ ಸಮನ್ವಯಾಧಿಕಾರಿ ತ್ಯಾಗರಾಜು, ಶಿಕ್ಷಣಸಂಯೋಜಕ ಭಾಸ್ಕರಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ನಿರ್ದೇಶಕಿ ಕೆ.ಸುಮಾ, ಅರುಣ, ಸಂಘದ ನಿರ್ದೇಶಕರು, ಸಿಆರ್‌ಪಿ ನರಸಿಂಹರಾಜು, ಶಿಕ್ಷಕ ಎಂ.ರಾಜಣ್ಣ, ಎನ್,ಸರಿತಾ ಅಭಿನಂದಿಸಿದ್ದಾರೆ.