Home News ಅಪ್ಪೇಗೌಡನಹಳ್ಳಿಯ ಡೇರಿ ಅಧಿಕಾರದ ಚುಕ್ಕಾಣಿ ಹಿಡಿದ JDS

ಅಪ್ಪೇಗೌಡನಹಳ್ಳಿಯ ಡೇರಿ ಅಧಿಕಾರದ ಚುಕ್ಕಾಣಿ ಹಿಡಿದ JDS

0
Sidlaghatta Appegowdanahalli KMF Dairy Election

Appegowdanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಹನುಮಂತರೆಡ್ಡಿ ಚುನಾಯಿತರಾಗಿದ್ದು ಉಪಾಧ್ಯಕ್ಷರಾಗಿ ವೆಂಕಟೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಅಪ್ಪೇಗೌಡನಹಳ್ಳಿ ಡೇರಿ ಮತ್ತೊಮ್ಮೆ JDS ಬಣದ ವಶವಾಗಿದೆ.

ಸಂಘದ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷಸ್ಥಾನಕ್ಕೆ ಹನುಮಂತರೆಡ್ಡಿ ಹಾಗೂ ನಾಗರಾಜ್ ನಾಮಪತ್ರ ಸಲ್ಲಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಹನುಮಂತರೆಡ್ಡಿ 9 ಮತಗಳನ್ನು ಪಡೆದು ಅಧ್ಯಕ್ಷರಾಗಿ ಚುನಾಯಿತರಾದರು. 4 ಮತಗಳನ್ನು ಪಡೆದ ನಾಗರಾಜ್ ಪರಾಭವಗೊಂಡಿದ್ದಾರೆ.

ತೀವ್ರ ಜಿದ್ದಾಜಿದ್ದಿನಿಂದ ನಡೆದ ಚುನಾವಣೆಯಲ್ಲಿ ಹನುಮಂತರೆಡ್ಡಿ ವಿಜಯ ಸಾಧಿಸುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಹಿರಿಯರಾದ ಮುನಿನಾರಾಯಣಪ್ಪ, ಡೇರಿ ಅಧ್ಯಕ್ಷ ಹನುಮಂತರೆಡ್ಡಿ, ಉಪಾಧ್ಯಕ್ಷ ವೆಂಕಟೇಶ್, ನಿರ್ದೇಶಕರಾದ ಯಶೋಧಮ್ಮ, ಕೇಶವ, ಗೋಪಾಲಪ್ಪ, ಶ್ರೀನಿವಾಸ್, ನಾಗೇಶ್, ಮನೋಜ್, ಅಂಬರೀಷ್ ಇನ್ನಿತರರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version