Home News ವಾಜಪೇಯಿ ಅವರ ಜನ್ಮದಿನಾಚರಣೆ

ವಾಜಪೇಯಿ ಅವರ ಜನ್ಮದಿನಾಚರಣೆ

0

Sidlaghatta : ದೇಶದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶಕಂಡ ಮಾದರಿ ನಾಯಕರಾಗಿದ್ದು, ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬ ಯುವಕರೂ ಅಳವಡಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸೀಕಲ್ ಆನಂದಗೌಡ ಹೇಳಿದರು.

ನಗರದ ಬಿಜೆಪಿ ಸೇವಾ ಸೌಧದಲ್ಲಿ ಸೋಮವಾರ ತಾಲ್ಲೂಕು ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿಯವರ ಹುಟ್ಟುಹಬ್ಬದ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಅಟಲ್ ಬಿಹಾರಿ ವಾಜಪೇಯಿ ಅವರು ಅಭಿವೃದ್ಧಿಯ ಹರಿಕಾರರಾಗಿದ್ದು, ತಮ್ಮ ಕೆಲಸಗಳ ಮೂಲಕ ಅವರು ದೇಶದ ಜನರ ಹೃದಯ ಗೆದ್ದಿದ್ದಾರೆ. ವಾಜಪೇಯಿ ಒಬ್ಬ ಅಜಾತಶತ್ರು, ದೇಶಕಂಡ ಹೆಮ್ಮಯ ನಾಯಕ. ಭ್ರಷ್ಟಚಾರ ನಿರ್ಮೂಲನೆ ಮಾಡಿದ ವ್ಯಕ್ತಿ. ಅವರ ಆಡಳಿತದ ಅವಧಿಯಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಕಂಡಿತ್ತು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಸುರೇಂದ್ರಗೌಡ ಮಾತನಾಡಿ, ಆರ್‌.ಎಸ್‌.ಎಸ್ ಕಾರ್ಯಕರ್ತರಾಗಿ, ತುರ್ತು ಪರಿಸ್ಥಿತಿಯಲ್ಲಿ ಹೋರಾಟ ಮಾಡಿ, ಬಿಜೆಪಿಯನ್ನು ಅಧಿಕಾರಕ್ಕೆ ತಂದ ಅವರ ಬದುಕು, ಧ್ಯೇಯ, ತತ್ವಾದರ್ಶ, ದಿಟ್ಟ ನಿಲುವು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ದೇಶ ಕಂಡ ಅಪ್ರತಿಮ ಪ್ರಧಾನಿ, ಅಜಾತಶತ್ರು, ಕವಿ ಹೃದಯಿ, ಮಾನವತಾವಾದಿ, ಮುತ್ಸದ್ಧಿ, ಉತ್ತಮ ವಾಗ್ಮಿಯಾಗಿದ್ದ ವಾಜಪೇಯಿಯವರನ್ನು ವಿರೋಧ ಪಕ್ಷದವರೂ ಸಹ ಮೆಚ್ಚುತ್ತಿದ್ದರು ಎಂದು ಹೇಳಿದರು.

ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡರಾದ ದಾಮೋದರ್, ಸುಜಾತಮ್ಮ, ನರೇಶ್, ತ್ರಿವೇಣಿ, ಕೇಶವಮೂರ್ತಿ, ಭರತ್ ಹಾಜರಿದ್ದರು.

For Daily Updates WhatsApp ‘HI’ to 7406303366

Namma Sidlaghatta WhatsApp Channel

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version