ನಗರದ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಸೋಮವಾರ ಹಿಂದೂ ಮತ್ತು ಮುಸ್ಲೀಂ ಸಮುದಾಯದ ಮುಖಂಡರೊಂದಿಗೆ ನಡೆಸಿದ ಶಾಂತಿ ಸಭೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಮಾತನಾಡಿದರು.
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನೆರವೇರಲಿರುವ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನಾಧ್ಯಂತ ದೇವಾಲಯಗಳಲ್ಲಿ ಪೂಜೆ, ಪ್ರಸಾದಕ್ಕೆ ಮಾತ್ರ ಸೀಮಿತಗೊಳಿಸಬೇಕು. ಯಾವುದೇ ರೀತಿಯಲ್ಲಿ ಪರ ಅಥವ ವಿರುದ್ಧವಾಗಿ ಪ್ರತಿಭಟನೆ ಹಾಗೂ ವಿಜಯೋತ್ಸವ ಆಚರಿಸುವಂತಿಲ್ಲ ಎಂದು ಅವರು ತಿಳಿಸಿದರು.
ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಮಾಡಲು ಬುಧವಾರ ಭೂಮಿ ಪೂಜೆ ನಡೆಯುವ ಹಿನ್ನಲೆಯಲ್ಲಿ ನಗರ ಸೇರಿದಂತೆ ತಾಲ್ಲೂಕಿನಾಧ್ಯಂತ ಸಾರ್ವಜನಿಕ ಪ್ರದೇಶಗಳಲ್ಲಿ ಎಲ್ಲಿಯೂ ಬಾವುಟ ಕಟ್ಟುವುದಾಗಲಿ, ವಿಜಯೋತ್ಸವ ಆಚರಿಸುವುದಾಗಲಿ ನಿಷೇಧಿಸಲಾಗಿದೆ. ಅದೇ ರೀತಿ ಅದನ್ನು ವಿರೋಧಿಸಿ ಪ್ರತಿಭಟನೆ ಮಾಡುವುದನ್ನು ಕೂಡ ನಿಷೇಧಿಸಲಾಗಿದೆ. ದೇವಸ್ಥಾನಗಳಲ್ಲಿ ಹೆಚ್ಚು ಜನರನ್ನು ಸೇರಿಸದೇ ಸರಳವಾಗಿ ಪೂಜೆ, ಪ್ರಸಾದ ವಿತರಣೆಗೆ ಮಾತ್ರ ಸೀಮಿತಗೊಳಿಸಬೇಕು ಎಂದರು.
ಸಭೆಯಲ್ಲಿ ಆಗಸ್ಟ್ 5 ರಂದು ಮದ್ಯದಂಗಡಿ ಮುಚ್ಚಿಸುವಂತೆ ಮುಖಂಡರಿಂದ ಸಲಹೆ ವ್ಯಕ್ತವಾಯಿತಾದರೂ ಮದ್ಯದಂಗಡಿ ಮುಚ್ಚಿಸಲು ಆಯಾ ಅಬಕಾರಿ ಡಿಸಿ ಗಳ ಹಂತದಲ್ಲಿ ಆಗಬೇಕು. ಅಬಕಾರಿ ಇಲಾಖೆಯವರೊಂದಿಗೆ ಚರ್ಚಿಸುವುದಾಗಿ ಸರ್ಕಲ್ ಇನ್ಸ್ ಪೆಕ್ಟರ್ ಹೇಳಿದರು.
ತಾಲ್ಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಆಯಾ ಸಮುದಾಯದ ಮುಖಂಡರು ಇಲಾಖೆಯವರೊಂದಿಗೆ ಸಹಕರಿಸಬೇಕು ಎಂದು ಸಬೆಯಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ನಗರ ಠಾಣೆ ಪಿಎಸ್ಸೈ ಸಂಗಪ್ಪಮೇಠಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ರಾಘವೇಂದ್ರ, ರಮೇಶ್‌ಬಾಯಿರಿ, ಜಾಮಿಯಾ ಮಸೀದಿಯ ತಾಜ್‌ಪಾಷ, ಹೈದರಾಲಿ, ಮದೀನಾ ಮಸೀದಿಯ ನಿಸಾರ್, ಅಸದ್, ಸಿ.ಎಂ.ಬಾಬು ಹಾಜರಿದ್ದರು.
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi