25.1 C
Sidlaghatta
Sunday, August 14, 2022

ಆಯುಷ್ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -
- Advertisement -

ಶಿಡ್ಲಘಟ್ಟ ನಗರದ ಸಿದ್ದಾರ್ಥ ನಗರದ ಶಾಲಾ ಆವರಣದಲ್ಲಿ ಭಾನುವಾರ ಆಯುಷ್ ಇಲಾಖೆಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಆರೋಗ್ಯ ಇದ್ದರೆ ನಾವು ಸುಖವಾಗಿ ಬಾಳಬಹುದು. ಕಷ್ಟಪಟ್ಟು ದುಡಿದ ಹಣವನ್ನು ಆಸ್ಪತ್ರೆಗೆ ಸುರಿಯುವ ಬದಲು ಕಾಯಿಲೆ ಬರದಂತೆ ತಡೆಯುವುದು ಜಾಣತನ. ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಅದ್ದರಿಂದ ಅಡ್ಡ ಪರಿಣಾಮವಾಗದಂತೆ ವೈದ್ಯರು ಸೂಚಿಸುವ ಆಯುಷ್ ಔಷಧವನ್ನು ಬಳಸಿ. ಗಿಡಮೂಲಿಕೆ ಔಷಧಿಗಳಿಂದ ಯಾವುದೇ ಅಡ್ಡ ಪರಿಣಾಮ ಇಲ್ಲದೇ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೈಹಿಕ ಆರೋಗ್ಯಕ್ಕೆ ಯೋಗ ವ್ಯಾಯಾಮ, ಮಾನಸಿಕ ಸ್ವಾಸ್ಥ್ಯಕ್ಕೆ ಧ್ಯಾನ ಪ್ರಾರ್ಥನೆ ಸಹಾಯಕ ಎಂದು ಅವರು ತಿಳಿಸಿದರು.

 ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ ಮಾತನಾಡಿ, ಆಯುಷ್‌ ಪದ್ಧತಿಯನ್ನು ಮುಖ್ಯವಾಹಿನಿಗೆ ತಂದು ಆರೋಗ್ಯವಂತ ಸಮಾಜ ನಿರ್ಮಾಣ ಆಯುಷ್‌ ಶಿಬಿರದ ಉದ್ದೇಶ, ವ್ಯಸನ ಮುಕ್ತ ಸಮಾಜ ಹಿತವಾದ ಆಹಾರ, ಕಾಯಕಗಳನ್ನು ಮಾಡುತ್ತ ಅರೋಗ್ಯವನ್ನು ಬೆಳೆಸಿಕೊಳ್ಳಬೇಕು. ಆಯುಷ್ ಇಲಾಖೆಯು ಗಿಡ ಮೂಲಿಕೆಗಳಿಂದ ತಯಾರಿಸಿದ ಔಷಧಿ ಸೇವಿಸುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಬೀರುವುದಿಲ್ಲ. ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆ ಗಳಲ್ಲಿ ಉಚಿತವಾಗಿ ಔಷಧಿ ನೀಡುತ್ತಾರೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.

 ಜಿಲ್ಲಾ ಆಯುಷ್ ಅಧಿಕಾರಿ ತಬಿನಾ ಬಾನು, ನಗರಸಭಾ ಅದ್ಯಕ್ಷೆ ಸುಮಿತ್ರಾ ರಮೇಶ್, ಡಾ.ವಿಜಯ್, ಡಾ.ಆವಿನಾಶ್, ಡಾ.ಸುಂದರರಾಜ್, ಡಾ.ಆನೀಲ್, ಡಾ.ಗುರು, ದೇವರಾಜ್, ಟಿ.ಟಿ.ನರಸಿಂಹಪ್ಪ, ಆಸ್ಪತ್ರೆಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here