Home News ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕರಪತ್ರ ಬಿಡುಗಡೆ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕರಪತ್ರ ಬಿಡುಗಡೆ

0
Sidlaghatta Ayushman Bharat Arogya Karnataka

Sidlaghatta : ಬಡ ರೈತರು, ಕೂಲಿ ಕಾರ್ಮಿಕರು, ನಾಗರಿಕರು ಹಣಕಾಸಿನ ತೊಂದರೆಯಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯದೇ ಬಳಲುತ್ತಿರುವುದರನ್ನು ಗಮನಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (Ayushman Bharat Arogya Karnataka) ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಜನರು ಸದುಪಯೋಗ ಮಾಡಿಕೊಳ್ಳುವ ಕುರಿತಾಗಿ ಕರಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಬಡವರಿಗೆ ಆರೋಗ್ಯಸೇವೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಯೋಜನೆಯೂ ಒಂದಾಗಿದೆ. ರಾಜ್ಯದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು 2018 ರಿಂದ ಆಯುಷ್ಠಾನಗೊಳಿಸಲಾಗುತ್ತಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿತು. ಈ ಎರಡೂ ಯೋಜನೆಗಳನ್ನು ಸಂಯೋಜಿಸಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ನಗರಸಭಾ ವತಿಯಿಂದ ನಗರದಲ್ಲಿ ಸರ್ಕಾರದ ಸೂಚನೆಯಂತೆ ಕಾರ್ಡ್ ಮಾಡಿಸಲು ಆದ್ಯತೆ ಮೇರೆಗೆ ತಮ್ಮ ಬಳಿಯ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆಯಾಗಿರುವ ಮೊಬೈಲ್‌ನ್ನು ಹತ್ತಿರದ ಗ್ರಾಮ-1 ಕೇಂದ್ರ ಅಥವಾಸಿ.ಎಸ್.ಸಿ ಸೆಂಟರ್ ಅಥವಾ ನಮ್ಮ ನಗರಸಭೆ ಸಿಬ್ಬಂದಿ ವರ್ಗದವರ బళి ಬಂದು ನೋಂದಾಯಿಸಿ ಕೊಳ್ಳಬೇಕಾಗಿರುತ್ತದೆ. ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಶಕ್ಕೆ 5 ಲಕ್ಷ ರೂರಪಾಯಿಯವರೆಗೆ ಉಚಿತ ಚಿಕಿತ್ಸೆ ಸಿಗಲಿದೆ. ಎಪಿಎಲ್ ಕಾರ್ಡುದಾರರಿಗೆ ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರಿಗೂ ಸಹ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದೆ. ವಾರ್ಷಿಕ ಪ್ರತಿ ಕುಟುಂಬಕ್ಕೆ 1.50 ಲಕ್ಷರೂಪಾಯಿಯವರೆಗೆ ಚಿಕಿತ್ಸೆ ಪಡೆಯಬಹುದು. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆಯಬಹುದು ಎಂದು ವಿವರಿಸಿದರು.

ಪೌರಾಯುಕ್ತ ಆರ್. ಶ್ರೀಕಾಂತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುನಿರಾಜು, ತಾಲ್ಲುಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥ ರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಸಿಡಿಪಿಒ ನವತಾಜ್, ಜಿಲ್ಲಾಧಿಕಾರಿ ಕಚೇರಿಯ ಪೂರ್ಣಚಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ನವೀನ್, ಕಿರಣ್‌ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version