ಶಿಡ್ಲಘಟ್ಟ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಯೊಜನೆಯ ಕುರಿತಂತೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಡಾ.ವೆಂಕಟೇಶಮೂರ್ತಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆ ಮತ್ತು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯನ್ನು ಸಂಯೋಜಿಸಿ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಎಂಬ ಯೊಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಈ ಆರೋಗ್ಯ ಕಾರ್ಡ್‍ಗಳನ್ನು ಇದುವರೆಗೂ ಮಾಡಿಸದೇ ಇರುವ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಯಲ್ಲಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನೀಡಿದರೆ ಕಾರ್ಡ್ ನೀಡುವರು. ಜಿಲ್ಲೆಯ ಪ್ರತಿಯೊಬ್ಬರಿಗೂ ಈ ಯೋಜನೆಯ ಕಾರ್ಡ್‍ಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಕಡುಬಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ದುಬಾರಿ ವೆಚ್ಚ ಭರಿಸುವಷ್ಟು ಶಕ್ತರಾಗಿರುವುದಿಲ್ಲ. ಇದನ್ನು ಮನಗಂಡ ಸರ್ಕಾರ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5.00 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.
ಡಾ.ವಾಣಿ, ಡಾ.ಯಶ್ವಂತ್, ಡಾ.ರಾಘವೇಂದ್ರ, ಡಾ.ಭರತ್, ಡಾ.ಸೋನಾಲಿ, ಆರೋಗ್ಯ ಮಿತ್ರ ವೆಂಕಟೇಶ, ಆರೋಗ್ಯ ನಿರೀಕ್ಷಣಾಧಿಕಾರಿ ಲೋಕೇಶ್, ಆರೋಗ್ಯ ಸುರಕ್ಷಿತ ಅಧಿಕಾರಿ ವಿಜಯಮ್ಮ, ಮುನಿರತ್ನಮ್ಮ, ಮಂಗಳ, ಸಿಬ್ಬಂದಿ ನಂದಿನಿ, ಸರೋಜಾ, ಗೀತಾ, ಅಪೇಕ್ಷಾ, ರಜಿನಿ, ಲಲಿತಮ್ಮ, ಕವಿತಾ, ನಬೀಬ್ ಉಲ್ಲಾ, ಚೇತನ್, ಸುನೀತಾ, ಮಂಜುಳಾ, ಸುಮಾ, ಡಾ.ಮಂಜುನಾಯಕ್, ಡಾ.ನಾಗರಾಜ್, ಡಾ.ಜಾನ್ಸಿ , ಡಾ.ಮನೋಹರ್, ಡಾ.ಪವಿತ್ರ, ಡಾ.ವಿಶ್ವಸ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi