Home News ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

0
SKDRDP Gnana Vikasa Sidlahgatta

ತಾಲ್ಲೂಕಿನ ಬಸವಾಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜು ಮಾತನಾಡಿದರು.

ಪ್ರತಿಯೊಬ್ಬರು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಿರಿ. ಬ್ಯಾಂಕಿನಲ್ಲಿ ನಾನಾ ರೀತಿಯ ಪ್ರಯೋಜನಗಳಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಅವರು ತಿಳಿಸಿದರು.

 ಹಿಂದೆ ಮಹಿಳೆಯರು ಮನೆಯಿಂದ ಹೊರಗೆ ಬಂದು ಮಾಹಿತಿ ಕೊಡಲು ಕೂಡ ತುಂಬಾ ಭಯಪಡುತ್ತಿದ್ದರು. ಧರ್ಮಸ್ಥಳದ ಜ್ಞಾನವಿಕಾಸ ಕಾರ್ಯಕ್ರಮದ ದಿಸೆಯಿಂದ ಮಹಿಳೆಯರು ಎಲ್ಲಾ ರೀತಿಯಲ್ಲಿ ಮುಂದೆ ಬಂದಿದ್ದು, ಜೊತೆಯಲ್ಲಿ ಆಟೋಟ ಸ್ಪರ್ಧೆಯಲ್ಲಿ ಕೂಡ ತಮ್ಮ ವಯಸ್ಸನ್ನು ಮರೆತು ಸಕ್ರಿಯವಾಗಿ ಭಾಗವಹಿಸಿದ್ದನ್ನು ಕಂಡು ತುಂಬಾ ಹೆಮ್ಮೆಯೆನಿಸುತ್ತಿದೆ ಎಂದರು.

 ಜಿಲ್ಲಾ ನಿರ್ದೇಶಕರಾದ ಬಿ.ವಸಂತ್ ಮಾತನಾಡಿ,  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನವಿಕಾಸ  ಕಾರ್ಯಕ್ರಮ ತಾಲೂಕಿನಲ್ಲಿ ಪ್ರಾರಂಭವಾಗಿ 7 ವರ್ಷಗಳನ್ನು ಪೂರೈಸಿದ್ದು, ಇದರ ಪ್ರಯಕ್ತ ಮಹಿಳಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬಸವಾಪಟ್ಟಣ ಗ್ರಾಮದಲ್ಲಿ ಹಮ್ಮಿಕೊಂಡು ಮಹಿಳೆಯರಿಗೆ ಆಟೋಟ ಸ್ಪರ್ಧೆಗಳನ್ನು ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಮಾಡುವುದರ ಮೂಲಕ ಬಹುಮಾನ ವಿತರಿಸುತ್ತಿದ್ದೇವೆ ಎಂದು ಹೇಳಿದರು..

 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲೆಯಾದ್ಯಂತ ಸಹಸ್ರಾರು ಸಂಘಗಳನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕೇವಲ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸಾಲದ ಸುಳಿಯಲ್ಲಿ ಸಿಲುಕಿಸುವ ಗುರಿ ನಮ್ಮದಲ್ಲ. ಮಹಿಳೆಯರಲ್ಲಿ ಉಳಿತಾಯ ಮನೋಭಾವನೆ, ಕುಟುಂಬ ನಿರ್ವಹಣೆ, ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಮಹಿಳೆಯರಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಸರ್ವಾಂಗೀಣ ಅಭಿವೃದ್ಧಿ ಸಾಧಿಸುವಂತೆ ಮಾಡುವುದೇ ಇದರ ಮೂಲ ಉದ್ದೇಶವಾಗಿದೆ.

 ಸಂಘದ ವತಿಯಿಂದ ಮದ್ಯವರ್ಜನ ಶಿಬಿರ, ಸಂಪೂರ್ಣ ಸುರಕ್ಷಾ ಕಾರ್ಯಕ್ರಮ, ಆಯುಷ್ಮಾನ್ ಕಾರ್ಯಕ್ರಮ, ಆರೋಗ್ಯ ರಕ್ಷ ಕಾರ್ಯಕ್ರಮ ಹೀಗೆ ಹಲವಾರು ಕಾರ್ಯಕ್ರಮಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮವು ಮಹಿಳೆಯರ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಅವರಿಗೆ ಧೈರ್ಯ, ನಂಬಿಕೆ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇಂದಿನ ದಿನ ನೀವೆಲ್ಲಾ ಇಷ್ಟು ಬದಲಾವಣೆಯಾಗಲು ಕಾರಣ ಜ್ಞಾನ ವಿಕಾಸ ಕಾರ್ಯಕ್ರಮ ಎಂದರು.

ಈ ಸಂದರ್ಭದಲ್ಲಿ ಮಹಿಳೆಯರಿಗೆ ಮ್ಯೂಸಿಕಲ್ ಚೇರ್, ಬಾಂಬ್ ಬ್ಲಾಸ್ಟ್, ನಿಂಬೆಹಣ್ಣು ಓಟ,  ಆಟಗಳನ್ನು ಏರ್ಪಡಿಸಿ ವಿಜೇತರಾದ ಮಹಿಳೆಯರಿಗೆ ಬಹುಮಾನವನ್ನು ಸಂಸ್ಥೆ ವತಿಯಿಂದ ನೀಡಲಾಯಿತು.

 ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೀಡ್ ಬ್ಯಾಂಕ್ ಅಧಿಕಾರಿ ಜಂಗಮಪ್ಪ,  ಜ್ಞಾನ ವಿಕಾಸ ಸಮನ್ವಯಾಧಿಕಾರಿ ಲಕ್ಷಿ, ವಲಯದ ಮೇಲ್ವಿಚಾರಕ ನಾರಪ್ಪ,  ಸೇವಾಪ್ರತಿನಿಧಿ ಚೈತ್ರ ಹಾಗೂ ನಲವತ್ತು ಜನ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version