Home News ಬಶೆಟ್ಟಹಳ್ಳಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬಶೆಟ್ಟಹಳ್ಳಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

0
Silaghatta Bashettahalli Grama Panchayat Election

Bashettahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ.ಬಿ.ವೆಂಕಟೇಶ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿದೇವಮ್ಮ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದುಳಿದ ವರ್ಗ ‘ಬ’ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ ಸ್ಥಾನ ಮೀಸಲಾಗಿತ್ತು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಿಗದಿತ ಸಮಯದಲ್ಲಿ ತಲಾ ಒಂದೊಂದೆ ನಾಮಪತ್ರ ಸಲ್ಲಿಕೆ ಆದ ಕಾರಣ 17 ಜನ ಸದಸ್ಯರ ಪೈಕಿ 13 ಸದಸ್ಯರು ಹಾಜರಿದ್ದ ಸಭೆಯಲ್ಲಿ ಈ ಇಬ್ಬರು ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಸಂತೋಷ್ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಡಿ.ಬಿ.ವೆಂಕಟೇಶ್ ಮಾತನಾಡಿ, ಸದಸ್ಯರ ಒಮ್ಮತದಿಂದ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಪಂಚಾಯತಿ ಮಟ್ಟದ ಮೂಲಭೂತ ಸೌಕರ್ಯಗಳಾದ ನೀರು ಸ್ವಚ್ಛತೆ ಬೀದಿ ದೀಪ ನೈರ್ಮಲ್ಯವನ್ನು ಕಾಪಾಡುವುದರೊಂದಿಗೆ ಸಾರ್ವಜನಿಕರಿಗೆ ಸಮಗ್ರ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡುತ್ತೇನೆ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಜ್ರೇಶ್, ಮಾಜಿ ಗ್ರಾ ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಧರ್ಮೇಂದ್ರ,ವಿ.ಎಸ್. ಮಂಜುನಾಥ್,ವಿ. ಎಂ. ಮಂಜುನಾಥ್, ಭಾರತಿ ರೆಡ್ಡಪ್ಪ, ಕಾಂತಮ್ಮ, ಸುಶ್ಮಿತ ದೇವರಾಜ್, ಬಿ.ಎಂ.ವೆಂಕಟರೆಡ್ಡಿ, ಸಿ. ವೆಂಕಟೇಶಪ್ಪ ಹಾಗೂ ಸದಸ್ಯರು, ಮುಖಂಡರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version