Belluti, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿಯ ಬೆಳ್ಳೂಟಿ ಕ್ಷೇತ್ರದ ಗ್ರಾಮ ಪಂಚಾಯಿತಿ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ವರಲಕ್ಷ್ಮಿಸಂತೋಷ್ ಅವರು ನಾಮಪತ್ರ ಸಲ್ಲಿಸಿದರು.
ಪರಿಸರಪ್ರೇಮಿ ಬೆಳ್ಳೂಟಿ ಸಂತೋಷ್ ಅವರ ನಿಧನದಿಂದ ತೆರವಾದ ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಬೆಳ್ಳೂಟಿ ಗ್ರಾಮ ಪಂಚಾಯಿತಿ ಕ್ಷೇತ್ರ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಸಂತೋಷ್ ಅವರ ಪತ್ನಿ ವರಲಕ್ಷ್ಮಿ ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.ಕಾಂಗ್ರೆಸ್ ಮುಖಂಡರಾದ ಪುಟ್ಟು ಆಂಜಿನಪ್ಪ, ಬೆಳ್ಳೂಟಿ ವೆಂಕಟೇಶ್ ಇದ್ದರು.
ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳ ಅವರು ನಾಮಪತ್ರವನ್ನು ಸ್ವೀಕರಿಸಿದರು. ನ.12ರವರೆಗೂ ನಾಮ ಪತ್ರ ಸಲ್ಲಿಕೆಗೆ ಅವಕಾಶವಿದೆ.