Sidlaghatta : ಬೆಂಗಳೂರಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಲಾಗುವುದು. ಅವುಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದು ಶಿಡ್ಲಘಟ್ಟ ತಾಲ್ಲೂಕು ಶಿಕ್ಷಕರ ಸಂಘದ ಬಿ.ನಾರಾಯಣಸ್ವಾಮಿ ಆಗ್ರಹಿಸಿದರು.
ಬೆಂಗಳೂರಲ್ಲಿ ಸೆಂಟ್ರಲ್ ಕಾಲೇಜು ಆವರಣದಲ್ಲಿ ಗುರುವಾರ ನಡೆದ ಶಿಕ್ಷಕರ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಭಾಗವಹಿಸಲು ಶಿಕ್ಷಕರೊಂದಿಗೆ ತೆರಳುವುದಕ್ಕೂ ಮೊದಲು ಇಲ್ಲಿನ ಕೋಟೆ ವೃತ್ತದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡುವುದು, ಪದವೀಧರ ಶಿಕ್ಷಕರ ಸಮಸ್ಯೆಗಳು, ಗ್ರಾಮೀಣ ಕೃಪಾಂಕ ಸಮಸ್ಯೆ, ಸಿ ಅಂಡ್ ಆರ್ ರೂಲ್ಸ್ ಇತ್ಯಾದಿ ಸಮಸ್ಯೆಗಳು ಹಲವು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದು ಅವುಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಘದಿಂದ ಮನವಿ ನೀಡಲಾಗುವುದೆಂದರು.
ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಮುನಿರಾಜು, ಸುಂದರಾಚಾರಿ, ಶ್ರೀನಿವಾಸ್ ಸೇರಿದಂತೆ ಶಿಕ್ಷಕರ ಸಂಘದ ಪದಾಕಾರಿಗಳು ಬೆಂಗಳೂರಿಗೆ ಶೈಕ್ಷಣಿಕ ಕಾರ್ಯಾಗಾರದಲ್ಲಿ ಭಾಗವಹಿಸಲು ತೆರಳಿದರು.