ಪೂರ್ಣ ಪುಟ · Open full page

SSLC ಫಲಿತಾಂಶ ಸುಧಾರಣೆಗೆ ವಿಶೇಷ ತರಗತಿ: ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ

Block Education Officer school visit, Palicherlu, Sidlaghatta

Sidlaghatta : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂಘಟಿತ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಮತ್ತು ಹಾಜರಾತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ.ಪಿ ಸೂಚಿಸಿದರು.

ತಾಲ್ಲೂಕಿನ ಪಲಿಚೇರ್ಲು ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಎಸ್‌.ಎಸ್‌.ಎಲ್‌.ಸಿ ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳ ಕಲಿಕಾ ಮಟ್ಟ ಸುಧಾರಿಸಲು ಪ್ರತಿದಿನ ಬೆಳಿಗ್ಗೆ ಒಂದು ಗಂಟೆ ಹಾಗೂ ಸಂಜೆ 4.30ರಿಂದ 5.30ರವರೆಗೆ ವಿಶೇಷ ತರಗತಿಗಳನ್ನು ನಡೆಸಬೇಕು. ಪ್ರತಿ ಶುಕ್ರವಾರ ಒಂದು ಅವಧಿಯಲ್ಲಿ ರಸಪ್ರಶ್ನೆ, ಆಶುಭಾಷಣ, ಚಿತ್ರಕಲೆ ಸೇರಿದಂತೆ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.

ಪ್ರತಿ ಶನಿವಾರ ಶಾಲಾ ಅವಧಿಯ ನಂತರ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರು ಸಭೆ ನಡೆಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಹಾಜರಾತಿಯನ್ನು ಪರಿಶೀಲಿಸಬೇಕು. ಶಿಕ್ಷಣ ಇಲಾಖೆ ಸೂಚಿಸಿರುವ 29 ಅಂಶಗಳ ಕಾರ್ಯಕ್ರಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಇಲಾಖೆ ನೀಡಿರುವ ದಿನಚರಿ ಹಾಗೂ ಮೌಲ್ಯ ಶಿಕ್ಷಣದ ಪುಸ್ತಕಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಬೇಕು. ನಿರಂತರವಾಗಿ ಗೈರುಹಾಜರಾಗುವ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ, ಪೋಷಕರೊಂದಿಗೆ ಚರ್ಚಿಸಿ ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸುವಂತೆ ಮನವೊಲಿಸಬೇಕು. ಏಳು ದಿನಗಳಿಗಿಂತ ಹೆಚ್ಚು ಕಾಲ ಶಾಲೆಗೆ ಗೈರುಹಾಜರಾದ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಅವರ ಪುನರ್‌ಹಾಜರಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮಕ್ಕಳ ಸುರಕ್ಷತೆಗೂ ಆದ್ಯತೆ :

ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಮಕ್ಕಳ ಸುರಕ್ಷತೆಗೂ ಆದ್ಯತೆ ನೀಡಬೇಕು. ಪೋಕ್ಸೊ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಕುರಿತು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಕ್ಕಳ ಹಕ್ಕುಗಳು, ಸುರಕ್ಷತೆ ಮತ್ತು ಕಾನೂನು ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ.ಪಿ ಅವರ ನೇತೃತ್ವದಲ್ಲಿ ಶಿಕ್ಷಣ ಸಂಯೋಜಕರಾದ ಮನ್ನಾರ್ ಸ್ವಾಮಿ ಹಾಗೂ ಮಂಜುನಾಥ್ ಅವರು ಶಾಲಾ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಎಸ್‌.ಎಸ್‌.ಎಲ್‌.ಸಿ ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿದರು.

ಸಂಬಂಧಿತ ಸುದ್ದಿ: ಸರ್ಕಾರಿ ಶಾಲೆಗಳಿಗೆ ಐದು ಲಕ್ಷ ಪುರಸ್ಕಾರ; ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ 1 ಲಕ್ಷ ರೂ ಬಹುಮಾನ

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ

error: Content is protected !!
Exit mobile version