News

ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ನ.21ರಂದು ಅವಕಾಶ: ಸಂಜೆ 3ರಿಂದ 5ರವರೆಗೆ ಬೆಸ್ಕಾಂ ಗ್ರಾಹಕ ಸಂವಾದ

Sidlaghatta BESCOM consumer interaction and electrical safety meeting power transmission tower

Sidlaghatta : ವಿದ್ಯುತ್ ಸಮಸ್ಯೆಗಳ ಪರಿಹಾರ ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ಮನವರಿಕೆ ಮಾಡಿಕೊಡಲು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ) ವತಿಯಿಂದ ನವೆಂಬರ್ 21ರ ಮೂರನೇ ಶನಿವಾರ ಅಪರಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಿಡ್ಲಘಟ್ಟ ಬೆಸ್ಕಾಂ ಕಚೇರಿಯಲ್ಲಿ ಗ್ರಾಹಕ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಯಾರು ಭಾಗವಹಿಸಬಹುದು?

  • ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು
  • ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು
  • ನಗರಸಭೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು
  • ರೈತ ಸಂಘದ ಮುಖಂಡರು
  • ತಾಲ್ಲೂಕಿನ ಎಲ್ಲಾ ವಿದ್ಯುತ್ ಗ್ರಾಹಕರು

ಸಭೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಅವರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

  • ದೂರವಾಣಿ: 08158-255615, 254528
  • ಮೊಬೈಲ್: 94482 79076

ಸಂಬಂಧಿತ ಸುದ್ದಿ: ಈ ಹಿಂದಿನ ಗ್ರಾಹಕ ಸಂವಾದ ಮತ್ತು ವಿದ್ಯುತ್ ಸುರಕ್ಷತಾ ಸಭೆ ಹಾಗೂ ಬೆಸ್ಕಾಂ ಗ್ರಾಹಕರ ಸಂವಾದ ಸಭೆ ಕುರಿತು ಓದಿ. ಬೆಸ್ಕಾಂ ಕುರಿತ ಎಲ್ಲ ಸುದ್ದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ