Home News BGS PU College ನಲ್ಲಿ ಸ್ವಸ್ತಿ-2026 ಕಾರ್ಯಕ್ರಮ

BGS PU College ನಲ್ಲಿ ಸ್ವಸ್ತಿ-2026 ಕಾರ್ಯಕ್ರಮ

0
BGS PU College swasthi 2026

Sidlaghatta : ಹದಿ ಹರೆಯದಲ್ಲಿ ಮಕ್ಕಳ ಮನಸ್ಸು ಎಲ್ಲವನ್ನೂ ಬಯಸುತ್ತದೆ. ಎಲ್ಲವನ್ನೂ ಅನುಭವಿಸುವ ಹಾಗೂ ಪಡೆದುಕೊಳ್ಳುವ ತವಕವಿರುತ್ತದೆ ಆದರೆ ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಪೋಷಕರು ಶ್ರದ್ದೆಯಿಂದ ಮಾಡಬೇಕು ಎಂದು ಬಿಜಿಎಸ್ ವಿದ್ಯಾ ಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ತಿಳಿಸಿದರು.

ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ BGS PU College ನಲ್ಲಿ ಸೋಮವಾರ ನಡೆದ ಸ್ವಸ್ತಿ-2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

13 ರಿಂದ 18 ರ ವಯಸ್ಸಿನವರೆಗೂ ಮಕ್ಕಳ ದೇಹ ಬೆಳೆದಿರುತ್ತದೆಯೇ ಹೊರತು ಮೆದುಳು ಬೆಳೆದಿರುವುದಿಲ್ಲ. ಹಾಗಾಗಿ ಅವರನ್ನು ಹತೋಟಿಯಲ್ಲಿಡುವ ಕೆಲಸ ಪೋಷಕರಿಂದಾಗಬೇಕು. ಚಂಚಲ ಮನಸು ಕೇಳಿದಂತೆಲ್ಲಾ ನಡೆದುಕೊಳ್ಳುತ್ತಾರೋ ಅವರು ಖಂಡಿತಾ ಒಂದಲ್ಲ ಒಂದು ದಿನ ಕಷ್ಟಕ್ಕೆ ಸಿಲುಕುತ್ತಾರೆ. ಮನುಷ್ಯನ ದೊಡ್ಡ ಶತ್ರು ಅವನ ಸೋಮಾರಿತನ ಎಂದರು.

ಮಕ್ಕಳಲ್ಲಿ ಯಾರೂ ದಡ್ಡರಲ್ಲ, ಅವರವರ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಸಮಯ ಮತ್ತು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಾಧನೆಗೆ ಏಕಾಗ್ರತೆ ಮುಖ್ಯ. ನಿರಂತರ ಅಧ್ಯಯನ ತಪಸ್ಸಿನಂತೆ ಮಾಡಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಹಾಗೂ ಯುವ ಜನರು ತಮ್ಮ ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಲು ಉತ್ತಮ ಸನ್ನಡತೆಯ ಸ್ನೇಹಿತರ ಗೆಳೆತನ ಮಾಡಬೇಕು, ಶಿಕ್ಷಕರು ಹೇಳಿದಂತೆ ಕೇಳಬೇಕು, ಗುರು ಹಿರಿಯರ ಮಾತನ್ನು ಆಲಿಸಿ ಪಾಲಿಸಬೇಕು ಎಂದು ನುಡಿದರು.

ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ತಮ್ಮಲ್ಲಿನ ಕೀಳರಿಮೆ ಬಿಡಿ. ಅಂಕಗಳೆ ಬದುಕಲ್ಲ. ಅಂಕಗಳೆ ಬದುಕನ್ನು ಅಳೆಯುವ ಅಂತಿಮ ವಿಧಾನವೂ ಅಲ್ಲ. ಬದುಕಿನಲ್ಲಿ ಅನೇಕ ಅವಕಾಶ ಬರುತ್ತದೆ. ಅವೆಲ್ಲವನ್ನೂ ಸದುಪಯೋಗಪಡಿಸಿಕೊಂಡು ಬದುಕನ್ನು ಸರಿಯಾದ ದಾರಿಯಲ್ಲಿ ಸಾಗುವಂತೆ ಮಾಡಿಕೊಳ್ಳಬೇಕೆಂದರು.
ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಹಾಗೂ ಶಿಕ್ಷಕರ ಪಾತ್ರ ಕುರಿತು ವಿವರಿಸಿದರು.

SSLC ಮತ್ತು ದ್ವಿತೀಯ PUC ಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಕೆ.ಮಹದೇವ್, ಹಿರಿಯ ವಿದ್ಯಾರ್ಥಿಗಳಾದ ವೈದ್ಯ ಡಾ.ಅರುಣ್.ಟಿ.ವಿ, ಆರ್.ಅನುಷ, ಸೇರಿದಂತೆ ಕಾಲೇಜು ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version