Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿಯ ಬಿಎಂವಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
In English: BMV Vidyasamsthe in Bhaktarahalli celebrated Teachers’ Day, with students honoring their teachers with mementos and secretary L. Kalappa paying floral tribute to Dr. Sarvepalli Radhakrishnan’s portrait.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಲ್. ಕಾಳಪ್ಪ ಅವರು ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಕೃತಜ್ಞತೆ ಅರ್ಪಿಸಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಎಲ್.ಕಾಳಪ್ಪ, “ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ನಿಷ್ಠೆ ತೋರಿಸುವುದರ ಜತೆಗೆ, ಶಿಕ್ಷಕರು ಕಲಿಸಿಕೊಟ್ಟ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಬದುಕು ರೂಪಿಸಿಕೊಳ್ಳಬೇಕು” ಎಂದು ಹೇಳಿದರು.
ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ವಿದ್ಯಾರ್ಥಿಗಳಿಂದ ಬಹುಮಾನ ವಿತರಿಸಲಾಯಿತು.
ಮುಖ್ಯ ಶಿಕ್ಷಕರಾದ ವೆಂಕಟಮೂರ್ತಿ, ಪಂಚಮೂರ್ತಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

