
ಸೆಪ್ಟೆಂಬರ್ 27 ರಂದು ಅಖಿಲ ಭಾರತ ಕಿಸಾನ್ ಸಂಯುಕ್ತ ಮೋರ್ಚಾದಿಂದ ನಡೆಯುವ ಭಾರತ್ ಬಂದ್‌ನ ಹಿನ್ನಲೆಯಲ್ಲಿ ನಗರದಲ್ಲಿ ಬೈಕ್ ರ್ಯಾಲಿ ನಡೆಸಿ ಬಂದ್‌ಗೆ ಬೆಂಬಲ ನೀಡುವಂತೆ ರೈತ ಸಂಘದ ನಗರ ಘಟಕದ ಅಧ್ಯಕ್ಷ ಬಿ.ನಾರಾಯಣಸ್ವಾಮಿ ಕೋರಿದರು.
ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನೂತನ ಕೃಷಿ ಕಾಯಿದೆ, ಎಪಿಎಂಸಿ ಕಾಯಿದೆಗಳ ತಿದ್ದುಪಡಿಯನ್ನು ವಿರೋಧಿಸಿ ಸೆಪ್ಟೆಂಬರ್ 27 ರ ಸೋಮವಾರ ನಡೆಯುವ ಭಾರತ್ ಬಂದ್‌ಗೆ ಎಲ್ಲರೂ ಬೆಂಬಲ ನೀಡುವಂತೆ ಮನವಿ ಮಾಡಿದರು.
ಸಾರಿಗೆ ಬಸ್ ನಿಲ್ದಾಣದಿಂದ ಆರಂಭಿಸಿ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿ ರೈತರ ಪರವಾಗಿ ನಡೆಯುವ, ರೈತ ವಿರೋ ನೀತಿಗಳ ವಿರುದ್ದ ಹಮ್ಮಿಕೊಂಡಿರುವ ಭಾರತ್ ಬಂದ್‌ಗೆ ಎಲ್ಲರೂ ಬೆಂಬಲಿಸುವಂತೆ ಕೋರಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಮಳಮಾಚನಹಳ್ಳಿ ರಮೇಶ್, ವೀರಾಪುರ ಮುನಿನಂಜಪ್ಪ, ಮಂಜುನಾಥ್, ದೇವರಾಜ್, ಏಜಾಜ್ ಭಾಗವಹಿಸಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi