Home News ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮತದಾನ ಜಾಗೃತಿ ಕಾರ್ಯಕ್ರಮ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮತದಾನ ಜಾಗೃತಿ ಕಾರ್ಯಕ್ರಮ

0
Bharat Scouts And Guides Chikkaballapur District

ತಾಲ್ಲೂಕಿನ ಮಳ್ಳೂರು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ  ನೂತನ ರೋವರ್ ರೇಂಜರ್ಸ್ ಘಟಕಗಳನ್ನು ಉದ್ಘಾಟಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಪ್ರಕಾಶ್ ಮಾತನಾಡಿದರು.

ಸ್ವಯಂ ಶಿಸ್ತು, ಸಾಮಾಜಿಕ ಅರಿವು, ದೇಶಪ್ರೇಮ ಹಾಗೂ ಕೌಶಲ್ಯಭರಿತ ಜ್ಞಾನಕ್ಕಾಗಿ ಇಂದಿನ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯು ಉತ್ತಮ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು.

 ಕಾಲೇಜಿನ ಪ್ರಾಂಶುಪಾಲ ಚಂದ್ರಕುಮಾರ್ ಮಾತನಾಡಿ, ಉತ್ತಮ ಭವಿಷ್ಯ ಕ್ಕಾಗಿ ಸ್ಕೌಟ್ಸ್ , ಗೈಡ್ಸ್ ಸಂಸ್ಥೆಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಸೇರಬೇಕೆಂದು ಕರೆ ನೀಡಿದರು.

  ಗ್ರಾಮ ಪಂಚಾಯಿತಿ ಚುನಾವಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಸೈಕಲ್ ಜಾಥಾ ವನ್ನು ಮೇಲೂರು, ಮಳ್ಳೂರು ಗ್ರಾಮದ ಬೀದಿಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

 ಕಾಲೇಜಿನ ರೋವರ್ ಲೀಡರ್ ಪ್ರಸನ್ನಕುಮಾರ್, ರೇಂಜರ್ ಲೀಡರ್ ಸೌಮ್ಯ, ತಾಲ್ಲೂಕು ಸಂಸ್ಥೆಯ ಸಹ ಕಾರ್ಯದರ್ಶಿ ಮುನಿರಾಜು, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, 50 ರೋವರ್ ರೇಂಜರ್ಸ್ ವಿದ್ಯಾರ್ಥಿಗಳು, ಮಳ್ಳೂರು ಗ್ರಾಮ ಪಂಚಾಯಿತಿ ಪಿ.ಡಿ.ಒ ಮಮತ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version