ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಸಮೀಪದ ಭಟ್ರೇನಹಳ್ಳಿಯ ಶ್ರೀಸಾಯಿ ಜ್ಞಾನಮಂದಿರದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ ರಾಮಕೃಷ್ಣ ಆಶ್ರಮದ ಶ್ರೀ ಪೂರ್ಣಾನಂದ ಸ್ವಾಮೀಜಿ ಅವರು ಮಾತನಾಡಿದರು.
ಸನ್ಮಾರ್ಗ, ಸದಾಚಾರ, ಒಳ್ಳೆಯ ಆಲೋಚನೆ, ಸನ್ನಡತೆ ರೂಢಿಸಿಕೊಂಡಾಗ ನಾವು ಸಮಾಜಕ್ಕೆ ಆಸ್ತಿಯಾಗುತ್ತೇವೆ. ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸುತ್ತಿರುವುದು ಶ್ಲಾಘನೀಯವಾದದ್ದು ಎಂದು ಅವರು ತಿಳಿಸಿದರು.
ನಿವೃತ್ತ ಶಿಕ್ಷಕ ವೈ.ಸಿ.ದೊಡ್ಡಯ್ಯ ಮಾತನಾಡಿ, ವಿದ್ಯೆಯಿಂದ ಜನ ವಿನಯವಂತರಾಗಬೇಕಿತ್ತು ಆದರೆ ಹಾಗಾಗಲಿಲ್ಲ. ಬಹುಜನರು ಗುರುವಿನ ಮಾರ್ಗದರ್ಶನದಲ್ಲಿ ಹೋಗಬೇಕಿತ್ತು ಅದು ಆಗಲಿಲ್ಲ ಮತ್ತೆಲ್ಲಿ ಪ್ರಬುದ್ಧ ಸಮಾಜ ನಿರ್ಮಾಣ. ಈ ರೀತಿಯ ಮನೋಧರ್ಮ ಬದಲಾಗಬೇಕು ಎಂದರು.
ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಶಾಂತ್ ಮಾತನಾಡಿ, ಧರ್ಮಸ್ಥಳ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಅರ್ಥಿಕ ಸ್ವಾವಲಂಬನೆಯ ಜೊತೆಗೆ ಸದಸ್ಯರಲ್ಲಿ ಧಾರ್ಮಿಕ ಚಿಂತನೆ ಹಾಗೂ ಜಾಗೃತಿಯನ್ನು ಮೂಡಿಸುತ್ತಿದೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆ, ವರಮಹಾಲಕ್ಷ್ಮಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಧರ್ಮ ಜಾಗೃತಿಯನ್ನು ಮೂಡಿಸುತ್ತಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್, ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂರ್ಯನಾರಾಯಣಪ್ಪ, ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ನವೀನ್ ಕುಮಾರ್, ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪವಿತ್ರಾ, ಸದಸ್ಯರಾದ ಭೈರೇಗೌಡ, ಮೇಲ್ವಿಚಾರಕರಾದ ಅನಿತಾ, ಚೈತ್ರಾ, ಒಕ್ಕೂಟದ ಅಧ್ಯಕ್ಷೆ ಮಂಜುಳಾ, ವನಿತಾ, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಸಾಯಿಮಂದಿರದ ಪದಾಧಿಕಾರಿಗಳು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi