Home News ಭಾವನಾ ಮಹರ್ಷಿ ಜಯಂತ್ಯುತ್ಸವ

ಭಾವನಾ ಮಹರ್ಷಿ ಜಯಂತ್ಯುತ್ಸವ

0
Sidlaghatta Bhavana Maharshi Jayanti

ಶಿಡ್ಲಘಟ್ಟ ನಗರದ ಉಲ್ಲೂರುಪೇಟೆಯ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಭಾನುವಾರ ಭಾವನಾ ಮಹರ್ಷಿ ಜಯಂತ್ಯುತ್ಸವದ ಅಂಗವಾಗಿ ಗಂಗಾಪೂಜೆ, ಕಳಶಸ್ಥಾಪನೆ, ಭಾವನಾ ಮಹರ್ಷಿ ಮತ್ತು ಭದ್ರಾವತಿ ದೇವಿಯ ಕಲ್ಯಾಣೋತ್ಸವ, ಲಾಜಾ ಹೋಮ, ವಿಶೇಷ ಪೂಜೆಯನ್ನು ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿತ್ತು.

ವೀರಾಂಜನೇಯಸ್ವಾಮಿ, ಭದ್ರಾವತಿ ಹಾಗೂ ಭಾವನಾ ಮಹರ್ಷಿಗಳ ಉತ್ಸವ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು ವಿಶೇಷ ಪೂಜೆ, ಮಹಾಮಂಗಳಾರತಿಯನ್ನು ಮಾಡಲಾಯಿತು. ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.

ತಾಲ್ಲೂಕು ಪದ್ಮಶಾಲಿ ಸಂಘದ ಮುಖಂಡರಾದ ಬಿ.ಲಕ್ಷ್ಮೀನಾರಾಯಣಪ್ಪ, ನಾಗರಾಜ್, ಪುರುಷೋತ್ತಮ್, ಎಸ್.ಕೆ.ನಾಗರಾಜ್, ಟಿ.ಲಕ್ಷ್ಮೀನಾರಾಯಣ, ಚಲಪತಿ, ತಾಲ್ಲೂಕು ಪದ್ಮಶಾಲಿ ಸಂಘ ಹಾಗೂ ಪದ್ಮಶಾಲಿ ಯುವಜನ ಸೇವಾ ಸಂಘದ ಸದಸ್ಯರು, ಅರ್ಚಕರಾದ ಬಿ.ಕೃಷ್ಣಮೂರ್ತಿ, ಅಕ್ಷಯ್ ಕುಮಾರ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version