Home News BJP ಕಾರ್ಯಕರ್ತರಿಂದ ರಕ್ತದಾನ ಶಿಬಿರ

BJP ಕಾರ್ಯಕರ್ತರಿಂದ ರಕ್ತದಾನ ಶಿಬಿರ

0
Sidlaghatta H Cross BJP Blood Donation camp

H Cross, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಎಚ್.ಕ್ರಾಸ್ ನಲ್ಲಿರುವ ಶ್ರೀ ಶನಿಮಹಾತ್ಮ ದೇವಾಲಯದ ಆವರಣದಲ್ಲಿ ಭಾನುವಾರ ಕ್ರಾಂತಿವೀರ ಚಂದ್ರಶೇಖರ್‌ಆಜಾದ್ ಸ್ಮರಣಾರ್ಥ BJP ಗ್ರಾಮಾಂತರ ಮಂಡಲದಿಂದ ಆಯೋಜಿಸಲಾಗಿದ್ದ ರಕ್ತಧಾನ ಶಿಬಿರದಲ್ಲಿ (Blood Donation Camp) ಭಾಗವಹಿಸಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ ಮಾತನಾಡಿದರು.

ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ, ವಿಜ್ಞಾನ ಎಷ್ಟೇ ಮುಂದುವರೆದರೂ ಕೃತಕ ರಕ್ತ ಸೃಷ್ಟಿಸಲು ಸಾಧ್ಯವಿಲ್ಲ. ಅಪಘಾತಗಳಂತಹ ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇದ್ದು ದಾನಿಗಳಿಂದ ಸಂಗ್ರಹವಾದ ರಕ್ತ ಮತ್ತೊಬ್ಬರ ಜೀವ ರಕ್ಷಣೆ ಮಾಡಲಿದೆ. ಯುವಜನತೆಯಲ್ಲಿ ರಾಷ್ಟ್ರ ಪ್ರೇಮವನ್ನು ಬೆಳೆಸುವುದರ ಜೊತೆಗೆ, ರಕ್ತದ ಕೊರತೆಯಿಂದಾಗಿ ಅಪಾಯದಲ್ಲಿರುವ ಜನರನ್ನು ಉಳಿಸಲು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತಹ ಮಾನವೀಯತೆಯನ್ನು ಬೆಳೆಸುವಂತಹ ಅಗತ್ಯವಿದೆ ಎಂದು ತಿಳಿಸಿದರು.

ನಾವು ನೀಡುವ ಒಂದು ಯೂನಿಟ್ ರಕ್ತ ಒಂದು ಜೀವವನ್ನು ಉಳಿಸುತ್ತದೆ ಹಾಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವುದನ್ನು ರೂಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಉಪಾಧ್ಯಕ್ಷ ಅರಿಕೆರೆ ಮುನಿರಾಜು, ಜಿಲ್ಲಾ ಕಾರ್ಯದರ್ಶಿ ದೇವರಾಜ್, ಜಿಲ್ಲಾ ಓಬಿಸಿ ಮೋರ್ಚಾದ ಆಂಜನೇಯಗೌಡ, ಪದಾಧಿಕಾರಿಗಳಾದ ಶ್ರೀಧರ್, ರಾಮಚಂದ್ರ, ನಟರಾಜ್ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version