Home News ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಸಹಯೋಗದೊಂದಿಗೆ ರಕ್ತದಾನ ಶಿಬಿರ

ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತ ನಿಧಿ ಸಹಯೋಗದೊಂದಿಗೆ ರಕ್ತದಾನ ಶಿಬಿರ

0

ತಾಲ್ಲೂಕಿನ ಚೀಮಂಗಲ ಗ್ರಾಮದ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಭಾರತೀಯ ಜನತಾ ಪಕ್ಷ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿಯ ಸಹಯೋಗದಲ್ಲಿ ಕ್ರಾಂತಿವೀರ ಚಂದ್ರಶೇಖರ್‌ಆಜಾದ್ ಜನ್ಮದಿನಾಚರಣೆ ಹಾಗೂ ಕಾರ್ಗಿಲ್ ವಿಜಯೋತ್ಸವದ ಸವಿನೆನಪಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ ಮಾತನಾಡಿದರು.

ಅಪಘಾತ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತ ಸಿಗದೇ ಬಹಳಷ್ಟು ಮಂದಿ ಮೃತ ಪಡುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ರಕ್ತದಾನ ಶಿಬಿರಗಳಲ್ಲಿ ಉಚಿತ ರಕ್ತದಾನ ಮಾಡುವ ಪ್ರವೃತ್ತಿಯನ್ನು ಯುವಜನತೆ ರೂಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಯುವಕರಲ್ಲಿ ರಾಷ್ಟ್ರಪ್ರೇಮ ಬೆಳಸುವುರ ಜೊತೆಗೆ ರಕ್ತ ಅವಶ್ಯಕವಿರುವವರಿಗೆ ಸಕಾಲದಲ್ಲಿ ರಕ್ತ ದೊರೆಯುವಂತೆ ಮಾಡುವ ಉದ್ದೇಶದಿಂದ ಕಳೆದ ಹಲವು ವರ್ಷಗಳಿಂದ ಬಿಜೆಪಿ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಸಂಸ್ಥೆಯಿಂದ ಉಚಿತ ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುತ್ತಿದ್ದು, ತಾಲ್ಲೂಕಿನ ಯುವಜನತೆಯಿಂದ ಉತ್ತಮವಾದ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸುಮಾರು 95 ಯೂನಿಟ್ ರಕ್ತ ಸಂಗ್ರಹವಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಬಿ.ಸಿ.ನಂದೀಶ್, ಮುಖಂಡರಾದ ದಾಮೋದರ್, ಸುಜಾತಮ್ಮ, ಅರಕೆರೆ ಮುನಿರಾಜು, ಶ್ರೀಧರ್ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

error: Content is protected !!