ಬಿಜೆಪಿ ನಗರ ಮಂಡಲ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

- Advertisement -
- Advertisement -

ನಗರದ ಎಸ್.ಎಲ್.ಎನ್ ಪ್ಲಾಜಾದಲ್ಲಿ ಬಿಜೆಪಿ ನಗರ ಮಂಡಲ ವತಿಯಿಂದ ಏರ್ಪಡಿಸಲಾಗಿದ್ದ ಚುನಾವಣಾ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಬಿಜೆಪಿ ನಗರ ಮಂಡಲಾಧ್ಯಕ್ಷ ಎಸ್.ರಾಘವೇಂದ್ರ ಮಾತನಾಡಿದರು.
ಅಕ್ಟೋಬರ್ 28 ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಹೇಳಿದರು.
ಬಿಜೆಪಿಯಲ್ಲಿ ಯಾರು ಯಾರಿಗೂ ನಾಯಕರಲ್ಲ. ಪ್ರತಿಯೊಬ್ಬ ಕಾರ್ಯಕರ್ತರು ಇಲ್ಲಿ ನಾಯಕರೇ ಎಂಬ ಮನೋಭಾವನೆಯಲ್ಲಿ ದುಡಿಯಬೇಕು. ವಿಶೇಷವಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿರುವ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ನಗರ ಮಂಡಲದ ಪದಾಧಿಕಾರಿಗಳಿಗೆ ಇದು ಮೊದಲ ಚುನಾವಣೆಯಾಗಿದ್ದು ಪ್ರತಿಯೊಬ್ಬರೂ 50 ಜನ ಪದವೀಧರ ಮತದಾರರ ನಿರಂತರ ಸಂಪರ್ಕ ಸಾಧಿಸುವ ಜೊತೆಗೆ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದರು.
ಸಭೆಗೂ ಮುನ್ನ ಇತ್ತೀಚೆಗಷ್ಟೇ ನಿಧನ ಹೊಂದಿದ ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ವಕ್ತಾರ ರಮೇಶ್ ಬಾಯರಿಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಸಿ.ನಂದೀಶ್ನಗರ ಮಂಡಲದ ಉಪಾಧ್ಯಕ್ಷ ಮಧುಕಾರ್ಯದರ್ಶಿಗಳಾದ ದೇವರಾಜ್ಮುಕೇಶ್ಸೇರಿದಂತೆ ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!