ವಿಧಾನ ಪರಿಷತ್ ಚುನಾವಣೆ: NDA ಅಭ್ಯರ್ಥಿ ಪರ ಒಗ್ಗಟ್ಟಿನ ಕೆಲಸಕ್ಕೆ ಬಿಜೆಪಿ–ಜೆಡಿಎಸ್ ಕಾರ್ಯಕರ್ತರಿಗೆ ಕರೆ

- Advertisement -
- Advertisement -

Sidlaghatta : ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ NDA ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.

ತಾಲ್ಲೂಕಿನ ಹಂಡಿಗನಾಳದ ಬಾಲಾಜಿ ಕನ್ವೆನ್ಷನ್ ಹಾಲ್‌ ನಲ್ಲಿ ಭಾನುವಾರ ನಡೆದ ಬಿಜೆಪಿ–ಜೆಡಿಎಸ್ ಮೈತ್ರಿ ಪಕ್ಷಗಳ ತಾಲ್ಲೂಕು ಸಮನ್ವಯ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆಗೆ ಎಷ್ಟು ಸಮಯ ಉಳಿದಿದೆ?

“ಚುನಾವಣೆಗೆ ಕೇವಲ 10 ದಿನಗಳ ಕಾಲಾವಕಾಶವಿದೆ. ಎರಡೂ ಪಕ್ಷಗಳ ಮುಖಂಡರು ಪ್ರತಿ ಗ್ರಾಮದಲ್ಲಿರುವ ಪದವೀಧರ ಮತದಾರರನ್ನು ಸಂಪರ್ಕಿಸಿ, ಅಭ್ಯರ್ಥಿಯ ಪರವಾಗಿ ಮತಯಾಚಿಸಬೇಕು. ಬೂತ್ ಮಟ್ಟದಲ್ಲಿ ಸಮನ್ವಯದಿಂದ ಕೆಲಸ ಮಾಡಬೇಕು” ಎಂದು ತಿಳಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಸುಮಾರು 143 ವಿಧಾನಸಭಾ ಕ್ಷೇತ್ರಗಳಲ್ಲಿ NDA ಅಭ್ಯರ್ಥಿಗಳಿಗೆ ಮುನ್ನಡೆ ದೊರೆತಿತ್ತು ಎಂದು ಉಲ್ಲೇಖಿಸಿದ ಅವರು, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಅಭ್ಯರ್ಥಿ ಮತ್ತು ಕ್ಷೇತ್ರದ ಬಗ್ಗೆ ಏನು ಹೇಳಲಾಯಿತು?

NDA ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಸುಮಾರು 25 ವರ್ಷಗಳಿಂದ ಬಿಜೆಪಿಯಲ್ಲಿ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯ 34 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ವಿಶ್ವಾಸವಿಟ್ಟು ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣಾ ಸಿದ್ಧತೆ ಕುರಿತು ಸಭೆ ನಡೆಸಲಾಗಿದೆ ಎಂದರು.

ಆಗ್ನೇಯ ಪದವೀಧರ ಕ್ಷೇತ್ರವು ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳನ್ನು ಒಳಗೊಂಡಿದ್ದು, ಸುಮಾರು 550ರಿಂದ 600 ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ. ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ಎರಡು ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಶಿಡ್ಲಘಟ್ಟ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ನಿಷ್ಠೆಯನ್ನು ಪರಿಗಣಿಸಿ, ವಿಧಾನಸೌಧಕ್ಕೆ ಯಾರು ಹೋಗಬೇಕು ಎಂಬುದನ್ನು ಪಕ್ಷದ ರಾಜ್ಯ ಮತ್ತು ಕೇಂದ್ರ ನಾಯಕರು ನಿರ್ಧರಿಸುತ್ತಾರೆ. ಹೀಗಾಗಿ ಸ್ಥಳೀಯ ಮುಖಂಡರು ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಮುಂಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.

ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಮುನಿಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ, MLC, ಚೌಡರೆಡ್ಡಿ, ಬಂಕ್ ಮುನಿಯಪ್ಪ, ಶಿವರೆಡ್ಡಿ, ರಘುನಾಥ ರೆಡ್ಡಿ, ಆನಂದ ಗೌಡ, ಡಾ.ಧನಂಜಯ ರೆಡ್ಡಿ, ಲಕ್ಷ್ಮೀನಾರಾಯಣರೆಡ್ಡಿ, ನಂದನವನ ಶ್ರೀರಾಮ ರೆಡ್ಡಿ, ಡಿಎಸ್ ಎನ್ ರಾಜು, ಗೋಪಾಲ್, ಆಂಜನೇಯ ಗೌಡ, ನಂದೀಶ್ ಹಾಜರಿದ್ದರು

In English: At a BJP–JDS alliance taluk coordination meeting held on Sunday at a convention hall in Handiganala, MLA B.N. Ravikumar called on BJP and JDS workers to work in unison for NDA candidate K.M. Suresh in the South-East Graduates’ Constituency election to the Karnataka Legislative Council. He said only 10 days remain before polling, urged leaders to contact graduate voters in every village and coordinate at booth level, and said the result matters for the 2028 Assembly election. BJP district president Seekal Ramachandra Gowda said the constituency covers Chitradurga, Davanagere, Tumakuru, Chikkaballapura and Kolar districts, with about two lakh voters. These are the speakers’ own claims.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -