ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೇಶಕ್ಕಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ದೇಶದ ಕಟ್ಟಕಡೆಯ ವ್ಯಕ್ತಿಗೂ ತಿಳಿಯಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ಮನೆ ಮನೆಗೂ ವಿತರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2 ನೇ ಅವಧಿಯ ಒಂದು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ನಗರದ ಕೋಟೆ ವೃತ್ತದ ಬಳಿಯಿರುವ ಶ್ರೀರಾಮ ದೇವಾಲಯದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದಲ್ಲಿ ದಶಕಗಳಿಂದ ದೇಶದಲ್ಲಿ ಕಾಡುತ್ತಿದ್ದ ಸವಾಲುಗಳಲ್ಲೊಂದಾದ ಆರ್ಟಿಕಲ್ 370 ರದ್ದತಿ, ಪೌರತ್ವ ತಿದ್ದುಪಡಿ ವಿಧೇಯಕ, ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ, ತ್ರಿವಳಿ ತಲಾಖ್ ಸೇರಿದಂತೆ ಅನಿರೀಕ್ಷಿತವಾಗಿ ದೇಶಕ್ಕೆ ವಕ್ಕರಿಸಿದ ಕೋವಿಡ್ 19 ಹರಡದಂತೆ ಕೈಗೊಂಡ ಕ್ರಮಗಳು ಶ್ಲಾಘನೀಯ, ಇಂತಹ ಮಹತ್ತರ ಯೋಜನೆಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎನ್ನುವ ದೃಷ್ಠಿಯಿಂದ ಕರಪತ್ರ ವಿತರಣೆ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ನಗರದ ಮುಖ್ಯರಸ್ತೆಗಳಲ್ಲಿ ಸಂಚರಿಸಿದ ಬಿಜೆಪಿ ಪದಾಧಿಕಾರಿಗಳು ಅಂಗಡಿ ಅಂಗಡಿಗೂ ತೆರಳಿ ಕರಪತ್ರ ವಿತರಿಸಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಎಸ್.ರಾಘವೇಂದ್ರ, ಮಾಜಿ ಅಧ್ಯಕ್ಷ ಬಿ.ಸಿ.ನಂದೀಶ್, ರಮೇಶ್‌ಬಾಯಿರಿ, ಸುರೇಶ್, ಅರಿಕೆರೆ ಮುನಿರಾಜು, ಶ್ರೀಧರ್, ಮುಕೇಶ್, ನರೇಶ್ ಹಾಜರಿದ್ದರು.
- Advertisement -
- Advertisement -
- Advertisement -