ಅ.2ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸ್ಥಳೀಯ ಚುನಾವಣೆ ಸಿದ್ಧತೆ ಸಭೆ, ರೈತರೊಂದಿಗೆ ಸಂವಾದ

- Advertisement -
- Advertisement -

Sidlaghatta : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಕ್ಟೋಬರ್ 2ರಂದು (ಶುಕ್ರವಾರ) ಶಿಡ್ಲಘಟ್ಟಕ್ಕೆ ಭೇಟಿ ನೀಡಲಿದ್ದು, ಪಕ್ಷದ ಸಂಘಟನೆ ಬಲಪಡಿಸುವುದು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ನಗರದ ಬಿಜೆಪಿ ಸೇವಾಸೌಧದಲ್ಲಿ ಮಂಗಳವಾರ ವಿಜಯೇಂದ್ರ ಅವರ ಭೇಟಿಯ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ವಿಜಯೇಂದ್ರ ಅವರನ್ನು ಶಿಡ್ಲಘಟ್ಟದ ಗಡಿಭಾಗದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಬಳಿಕ ನಗರದ ಕೋಟೆ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಅಲ್ಲಿಂದ ಕಾಲ್ನಡಿಗೆಯಲ್ಲಿ ಬಿಜೆಪಿ ಸೇವಾಸೌಧ ಕಚೇರಿಗೆ ತೆರಳಲಿದ್ದಾರೆ ಎಂದು ವಿವರಿಸಿದರು.

ಭೇಟಿಯ ವೇಳೆ ಯಾವ ಸಭೆ, ಸಂವಾದ ನಡೆಯಲಿದೆ?

ಬಿಜೆಪಿ ಸೇವಾಸೌಧ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರೈತರು ಹಾಗೂ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಲಿದ್ದು, ಪ್ರಸ್ತುತ ಕೃಷಿ ಕ್ಷೇತ್ರದ ಸ್ಥಿತಿಗತಿ, ರೈತರ ಸಮಸ್ಯೆಗಳು ಹಾಗೂ ಸ್ಥಳೀಯವಾಗಿ ಎದುರಾಗಿರುವ ವಿವಿಧ ವಿಚಾರಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಿದ್ದಾರೆ. ಈ ಸಂವಾದದ ಮೂಲಕ ಸ್ಥಳೀಯರ ಸಮಸ್ಯೆಗಳು ಮತ್ತು ನಿರೀಕ್ಷೆಗಳನ್ನು ಆಲಿಸಲು ಅವಕಾಶವಾಗಲಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರ ರಾಜಕೀಯ ಜೀವನದಲ್ಲಿ 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಸೇವಾ ಮಾಸದ ಅಂಗವಾಗಿ ಶಿಡ್ಲಘಟ್ಟದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಭಾಗವಾಗಿ ವಾಸವಿ ಶಾಲೆಯಲ್ಲಿ ನಡೆಯಲಿರುವ ರಂಗೋಲಿ ಸ್ಪರ್ಧೆ ಹಾಗೂ ಗಿಡ ನೆಡುವ ಕಾರ್ಯಕ್ರಮದಲ್ಲಿಯೂ ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷರ ಭೇಟಿಯ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದ್ದು, ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸೀಕಲ್ ರಾಮಚಂದ್ರಗೌಡ ಹೇಳಿದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ ಗೌಡ, ನಗರ ಮಂಡಲ ಅಧ್ಯಕ್ಷ ದೇವರಾಜ್, ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ಕನಕಪ್ರಸಾದ್, ಚೆಲುವರಾಜ್ ಹಾಜರಿದ್ದರು.

ಪ್ರಧಾನಿ ಮೋದಿ ಜನ್ಮದಿನ ಸೇವಾ ಮಾಸ ಕುರಿತು ಸೋಮೇಶ್ವರ ದೇವಾಲಯದಲ್ಲಿ ದೀಪಾಲಂಕಾರ, ವಿಶೇಷ ಪೂಜೆ: ಮೋದಿ ಜನ್ಮದಿನಾಚರಣೆ ಹಾಗೂ ಬಿಜೆಪಿ–ಜೆಡಿಎಸ್ ಜಿಲ್ಲಾ ಸಭೆ ಕುರಿತು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ: NDA ಅಭ್ಯರ್ಥಿ ಪರ ಪ್ರಚಾರಕ್ಕೆ ಸೆ.30ರಂದು ಬಿಜೆಪಿ–ಜೆಡಿಎಸ್ ಜಿಲ್ಲಾ ಸಭೆ ವರದಿಗಳನ್ನೂ ಓದಿ.

In English: BJP state president B.Y. Vijayendra will visit Sidlaghatta on Friday, October 2, to discuss strengthening the party organisation and preparing for the upcoming local body elections with leaders, workers and office-bearers, BJP district president Seekal Ramachandra Gowda said at the BJP Seva Soudha in the town on Tuesday. Party leaders and workers will welcome him at the Sidlaghatta border, after which he will offer puja at the Someshwara temple at Kote Circle and walk to the Seva Soudha for a meeting. He will also interact with farmers and intellectuals on the state of agriculture and local issues, and take part in a rangoli competition and tree-planting programme at Vasavi School, held as part of the party’s Seva Month marking Prime Minister Narendra Modi’s birthday and 25 years in public life.

FAQ

ಬಿ.ವೈ. ವಿಜಯೇಂದ್ರ ಶಿಡ್ಲಘಟ್ಟಕ್ಕೆ ಯಾವಾಗ ಬರಲಿದ್ದಾರೆ?
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಕ್ಟೋಬರ್ 2ರಂದು (ಶುಕ್ರವಾರ) ಶಿಡ್ಲಘಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದ್ದಾರೆ.

ಭೇಟಿಯ ವೇಳೆ ಯಾವ ಕಾರ್ಯಕ್ರಮಗಳಿವೆ?
ಕೋಟೆ ವೃತ್ತದ ಸೋಮೇಶ್ವರ ದೇವಾಲಯದಲ್ಲಿ ಪೂಜೆ, ಬಿಜೆಪಿ ಸೇವಾಸೌಧದಲ್ಲಿ ಕಾರ್ಯಕರ್ತರ ಸಭೆ, ರೈತರು ಹಾಗೂ ಬುದ್ಧಿಜೀವಿಗಳೊಂದಿಗೆ ಸಂವಾದ ಮತ್ತು ವಾಸವಿ ಶಾಲೆಯಲ್ಲಿ ರಂಗೋಲಿ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮ.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -