ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದಲ್ಲಿ ನಾಯಿಗಳ ಧಾಳಿಗೊಳಗಾದ ಕೃಷ್ಣಮೃಗವನ್ನು ಸೋಮವಾರ ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಸಿಬ್ಬಂದಿಗೆ ಒಪ್ಪಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಿದರಾದರೂ ಅದು ಫಲಕಾರಿಯಾಗದೇ ಮೃತಪಟ್ಟಿದೆ.
ಬೇಸಿಗೆಯ ಬೇಗೆಯನ್ನು ತಡೆಯಲಾರದೆ ಕೃಷ್ಣಮೃಗ ಹಳ್ಳಿಯ ಬಳಿ ಬಂದಿರಬೇಕು. ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗಾಗಿ ನೀರನ್ನು ಇಡುವ ವ್ಯವಸ್ಥೆಯಾಗಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ರಾಜಪ್ಪ ತಿಳಿಸಿದರು.
ಅರಣ್ಯ ಇಲಾಖೆಯ ರಮೇಶ್, ಗೋವಿಂದರಾಜ್, ಗ್ರಾಮ ಪಂಚಾಯಿತಿ ಸದಸ್ಯ ರಾಜಪ್ಪ, ರಂಜಿತ್, ಸುಮನ್ ಹಾಜರಿದ್ದರು.