Home News ನ್ಯಾಯಾಧೀಶರ ಹತ್ಯೆಯ ನಿಷ್ಪಕ್ಷ ತನಿಖೆಗೆ ಒತ್ತಾಯ

ನ್ಯಾಯಾಧೀಶರ ಹತ್ಯೆಯ ನಿಷ್ಪಕ್ಷ ತನಿಖೆಗೆ ಒತ್ತಾಯ

0
judge murder investigation

ಜಾರ್ಖಂಡ್‌ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರನ್ನು ಹತ್ಯೆ ಮಾಡಿದವರನ್ನು ಬಂಧಿಸಿ, ಈ ಕುರಿತಂತೆ ನಿಷ್ಪಕ್ಷವಾದ ತನಿಖೆ ನಡೆಸಬೇಕು ಎಂದು ಅಖಲ ಭಾರತ ವಕೀಲರ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಸಮಿತಿ ಆಹ್ವಾನಿತ ಸದಸ್ಯ ಹಾಗೂ ಶಿಡ್ಲಘಟ್ಟ ವಕೀಲರ ಸಂಘದ ಸದಸ್ಯ ಎಚ್.ಎನ್. ಕೃಷ್ಣ ಮೂರ್ತಿ ಒತ್ತಾಯಿಸಿದ್ದಾರೆ.

 ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನ್ಯಾಯಾಧೀಶರ ಸಾವಿನ ತನಿಖೆಗೆ ಜಾರ್ಖಂಡ್ ಹೈಕೋರ್ಟ್‌ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಅದು ಪೂರ್ವಯೋಜಿತ ಕೊಲೆ ಎಂಬ ಅನುಮಾನ ವ್ಯಕ್ತವಾಗಿರುವ ಕಾರಣ ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ. ನ್ಯಾಯಾಧೀಶರ ಸಾವು ಪೂರ್ವಯೋಜಿತ ಕೊಲೆ ಎಂದು ಜಾರ್ಖಂಡ್ ವಕೀಲರ ಸಂಘ ಅನುಮಾನ ವ್ಯಕ್ತಪಡಿಸಿದೆ. “ಹಲವು ಅಪರಾಧ ಪ್ರಕರಣಗಳಲ್ಲಿ ಅವರು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿದ್ದರು. ಈಚೆಗೆ ಇಬ್ಬರು ದೊಡ್ಡ ಗ್ಯಾಂಗ್‌ಸ್ಟರ್‌ಗಳ ಜಾಮೀನು ಅರ್ಜಿಯನ್ನು ಅವರು ತಿರಸ್ಕರಿಸಿದ್ದರು. ಜಾಮೀನು ನೀಡದಿದ್ದ ಕಾರಣಕ್ಕೇ ಅವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ” ಎಂದು ಜಾರ್ಖಂಡ್ ಹೈಕೋರ್ಟ್‌ಗೆ ಬರೆದ ಪತ್ರದಲ್ಲಿ ಸಂಘವು ಅನುಮಾನ ವ್ಯಕ್ತಪಡಿಸಿದೆ.

ಈ ಹತ್ಯೆ ಅತ್ಯಂತ ಖಂಡನಿಯ. ಈ ಕೂಡಲೇ ಸೂಕ್ತ ಹಾಗೂ ಸರಿಯಾದ ತನಿಖೆ ನಡೆಸಿ, ಆರೋಪಿಗಳನ್ನು ಬಂದಿಸಿ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version