Home News ಕಾವೇರಿ ನೀರು ಬಿಡುಗಡೆಗೆ ವಿರೋಧ: ಮುಖ್ಯಮಂತ್ರಿಗೆ ಮನವಿ

ಕಾವೇರಿ ನೀರು ಬಿಡುಗಡೆಗೆ ವಿರೋಧ: ಮುಖ್ಯಮಂತ್ರಿಗೆ ಮನವಿ

0
0

Sidlaghatta : ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಶಿಡ್ಲಘಟ್ಟದ ವಿವಿಧ ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಗುರುವಾರ ತಹಶೀಲ್ದಾರ್ ಗಗನಸಿಂಧು ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕರ್ನಾಟಕದ ರೈತರು ಹಾಗೂ ಜನರು ನೀರಿನ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಪರಿಸ್ಥಿತಿಯನ್ನು ಪರಿಗಣಿಸದೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರ ಸರಿಯಲ್ಲ ಎಂದು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಕುಡಿಯುವ ನೀರಿನ ಲಭ್ಯತೆಯ ಬಗ್ಗೆಯೂ ಆತಂಕ ಎದುರಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದ ಜಲಸಂಪನ್ಮೂಲಗಳ ಬಳಕೆ ಮತ್ತು ನೀರಿನ ಲಭ್ಯತೆಯನ್ನು ಸಮಗ್ರವಾಗಿ ಪರಿಗಣಿಸಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕರ್ನಾಟಕದ ಹಿತಾಸಕ್ತಿ ಹಾಗೂ ರಾಜ್ಯದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕಾನೂನುಬದ್ಧವಾಗಿ ಲಭ್ಯವಿರುವ ಎಲ್ಲ ಮಾರ್ಗಗಳನ್ನು ಬಳಸಬೇಕು ಎಂದು ಮುಖಂಡರು ಆಗ್ರಹಿಸಿದರು.

ಸರ್ಕಾರ ಕಾವೇರಿ ನೀರು ಬಿಡುಗಡೆಯನ್ನು ಮುಂದುವರಿಸಿದರೆ, ಮುಂದಿನ ದಿನಗಳಲ್ಲಿ ಶಿಡ್ಲಘಟ್ಟದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹಂತ ಹಂತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಅಧ್ಯಕ್ಷ ಸುರೇಶ್ ಆರ್ (ಭಗತ್), ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ರಾಮಾಂಜಿ, ಕನ್ನಡ ರಕ್ಷಣಾ ವೇದಿಕೆ (ಶಿವರಾಮಗೌಡ ಬಣ)ದ ಸುನಿಲ್ ಎ, ಕರ್ನಾಟಕ ಜನಸೇನೆ ಅಧ್ಯಕ್ಷ ಸೋಮಶೇಖರ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ವರದರಾಜ್, ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ವಿಜಯ್, ಮನೋಜ್, ವಂಶಿ, ಅರುಣ್, ನಾಗಭೂಷಣ್, ಗಂಗಾಧರ್, ಮಂಜುನಾಥ (ಅಂಬಾರಿ), ನಿತಿನ್ ಹಾಗೂ ಶಿವಕುಮಾರ್ ಇದ್ದರು.

In English: Leaders of several pro-Kannada organizations in Sidlaghatta submitted a memorandum to the Karnataka Chief Minister, via the tahsildar, opposing a Supreme Court order directing release of Cauvery river water to Tamil Nadu amid drought conditions in the state. They argued the state’s water and farming needs should be considered before any release, and said they would hold phased protests if the release continues.

ಈ ಹಿಂದೆ ದೆಹಲಿಯಲ್ಲಿ ನಡೆದ ಕಾವೇರಿ ಪರ ಪ್ರತಿಭಟನೆಯಲ್ಲಿ ಶಿಡ್ಲಘಟ್ಟದ ರೈತರ ಭಾಗಿ ಆಗಿದ್ದ ವರದಿಯನ್ನೂ ನೋಡಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!