Home Culture ಚಾಮುಂಡೇಶ್ವರಿ ಜಯಂತಿ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ

ಚಾಮುಂಡೇಶ್ವರಿ ಜಯಂತಿ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ

0

ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಬಳಿ ಇರುವ ನಲ್ಲರಾಳ್ಳಹಳ್ಳಿ ಚಾಮುಂಡೇಶ್ವರಿ ದೇವಿಗೆ ಚಾಮುಂಡೇಶ್ವರಿ ಜಯಂತಿ ಅಂಗವಾಗಿ ಶುಕ್ರವಾರ ವಿಶೇಷ ಪೂಜೆ ಹಾಗೂ ವಿಶ್ವಶಾಂತಿಗಾಗಿ ವಿವಿಧ ಹೋಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Bashettihalli Chamundeshwari Temple

ಗಣಪತಿ ಹೋಮ, ಸಹಸ್ರ ದುರ್ಗ ಹೋಮ, ಮೃತ್ಯುಂಜಯ ಹೋಮ, ನವಗ್ರಹ ಹೋಮ ಹಾಗೂ ದಶಾಭಿಷೇಕ ಹೋಮಗಳನ್ನು ನೆರವೇರಿಸಲಾಯಿತು. ದೇವಿಗೆ ಸುಮಂಗಲಿ ಅಲಂಕಾರವನ್ನು ಮಾಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು, ತಾಲ್ಲೂಕು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು.

ತಾಲ್ಲೂಕಿನ ಮೇಲೂರಿನಲ್ಲಿನ ಶ್ರೀ ಗಂಗಾದೇವಿ ಅಮ್ಮನವರ ದೇವಸ್ಥಾನದಲ್ಲಿ ಚಂಡಿಕಾ ಯಾಗವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮದಲ್ಲಿ ಉತ್ಸವ ಮೂರ್ತಿಗಳೊಂದಿಗೆ, ಸುಮಂಗಲಿಯರು ದೀಪಗಳನ್ನು ಹೊತ್ತುಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಮೇಲೂರು ಸುತ್ತಮುತ್ತಲಿನ ಗ್ರಾಮಗಳಾದ ಮಳ್ಳೂರು, ಭಕ್ತರಹಳ್ಳಿ, ಹಂಡಿಗನಾಳ, ಕೊಂಡೇನಹಳ್ಳಿ, ಮಳಮಾಚನಹಳ್ಳಿ ಮುಂತಾದೆಡೆಗಳಿಂದ ಭಕ್ತರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು.

ನಗರದ ಕುರುಬರಪೇಟೆಯ ಶ್ರೀರಾಮ ಮತ್ತು ಮಾರಮ್ಮ ದೇವಾಲಯ ಹಾಗೂ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶ್ರೀ ಚಾಮುಂಡೇಶ್ವರಿಯ ಜನ್ಮದಿನೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಎಲ್ಲೆಡೆ ದೇವಿಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಕುರುಬರಪೇಟೆಯ ಶ್ರೀರಾಮ ಮತ್ತು ಮಾರಮ್ಮ ದೇವಾಲಯದಲ್ಲಿ ಮಂಜುಳಾ ಜಗದೀಶ್ ತಂಡದವರಿಂದ ಸಂಗೀತ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಗಿರೀಶ್, ದೇವಾಲಯ ಸಮಿತಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಮಾರಮ್ಮ ದೇವಾಲಯದ ಪ್ರಧಾನ ಅರ್ಚಕ ರಾಜಶೇಖರ, ಸಾಯಿಶ್, ಕೃಷ್ಣಮೂರ್ತಿ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version