Sidlaghatta : ಹಿಂದೂಸ್ಥಾನವನ್ನು ಒಗ್ಗೂಡಿಸಲು ಶ್ರಮಿಸಿದಂತಹ ಮಹಾನ್ ಪುರುಷರಲ್ಲಿ ಛತ್ರಪತಿ ಶಿವಾಜಿ ಪ್ರಮುಖರು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಭಾರತದಲ್ಲಿ ಅತ್ಯಂತ ಧೈರ್ಯಶಾಲಿ ಪುರುಷರು ಮಾತ್ರವಲ್ಲ, ಕೆಲವೊಂದು ಮಹಿಳೆಯರು ಕೂಡ ಆಡಳಿತ ನಡೆಸಿದ ಇತಿಹಾಸವಿದೆ. ಈ ಧೈರ್ಯಶಾಲಿ ಸಾಮ್ರಾಜ್ಯದ ಅಧಿಪತಿಗಳು ತಮ್ಮ ತಾಯಿನಾಡು ಮತ್ತು ಸ್ವರಾಜ್ಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಜಿಸಿದ್ದಾರೆ. ಅಂತಹ ಮಹಾನ್ ಧೈರ್ಯಶಾಲಿ ಯೋಧರಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಕೂಡ ಒಬ್ಬರಾಗಿದ್ದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ಶೀರಸ್ತೇದಾರ್ ಆಸಿಯಾ ಬೀ, ಆರೋಗ್ಯ ನಿರೀಕ್ಷಕ ದೇವರಾಜ್, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮಂಜುನಾಥ್, ಮತ್ತಿತರರು ಹಾಜರಿದ್ದರು.