24.7 C
Sidlaghatta
Tuesday, February 24, 2026

ಚಿಕ್ಕದಾಸರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂತೆ

- Advertisement -
- Advertisement -

Chikkadasarahalli, Sidlaghatta : ಜೀವನದ ಮೌಲ್ಯಗಳನ್ನು ಕಲಿಯದ ಹೊರತು ಶಿಕ್ಷಣ ಪರಿಪೂರ್ಣವಾಗುವುದಿಲ್ಲ ಎಂದು ಗ್ರಾಮ ಪಂಚಾಯಿತಿ ಪಿಡಿಓ ಶೈಲಾ ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಚಿಕ್ಕದಾಸರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳಿಗೆ ಬರೀ ಪುಸ್ತಕದಲ್ಲಿನ ಪಾಠ ಹೇಳಿಕೊಟ್ಟರೆ ಸಾಲದು, ಬದಲಿಗೆ ಮಕ್ಕಳಲ್ಲಿ ಚಿಕ್ಕಂದಿನಿಂದಲೇ ಜೀವನದ ಮೌಲ್ಯಗಳನ್ನು ಕಲಿಸಬೇಕು. ತಮ್ಮ ಪೋಷಕರ ಕಷ್ಟ ಸುಖಗಳು ಮಕ್ಕಳಿಗೆ ತಿಳಿಯಬೇಕು. ಹೊರಗಿನ ಜಗತ್ತಿನಲ್ಲಿ ಜೀವನ ಹೇಗೆ ರೂಪಿಸಿಕೊಳ್ಳಬೇಕು ಎಂಬುದನ್ನು ತಿಳಿಸುವ ಉದ್ದೇಶದಿಂದ ಶಾಲೆಯಲ್ಲಿ ಮಕ್ಕಳ ಸಂತೆ ಆಯೋಜಿಸಿದ್ದು ಪುಟಾಣಿ ಮಕ್ಕಳ ಸಂತೆಯಲ್ಲಿ ಭಾಗವಹಿಸಿರುವ ಪೋಷಕರೂ ಸೇರಿದಂತೆ ಶಾಲಾ ಸಿಬ್ಬಂದಿ ಸಂತೆಯಲ್ಲಿರುವ ಎಲ್ಲ ವಸ್ತುಗಳನ್ನು ಖರೀದಿಸುವ ಮೂಲಕ ಮಕ್ಕಳನ್ನು ಪ್ರೋತ್ಸಾಹಿಸಿ ಎಂದರು.

ಸಿ.ಆರ್‌.ಪಿ ಬಾಬು ಮಾತನಾಡಿ ಮಕ್ಕಳಲ್ಲಿ ವ್ಯಾಪಾರೀ ಮನೋಭಾವ ಬೆಳೆಸುವುದು ಸೇರಿದಂತೆ ವಸ್ತುಗಳನ್ನು ಖರೀದಿಸುವಾಗ ಕಲಿಯಬೇಕಾದ ಮಾಪನಗಳನ್ನು ಪ್ರಾಯೋಗಿಕವಾಗಿ ಮಕ್ಕಳಲ್ಲಿ ಕಲಿಸಲು ಮಕ್ಕಳ ಸಂತೆ ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ದೇವರಾಜ್, ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಮ್ಮ, ಗ್ರಾ.ಪಂ ಸದಸ್ಯ ಮುನಿರಾಜು, ಸಿಬ್ಬಂದಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!