ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

0
944
Medical Camp for Municipality Workers Sidlaghatta

ಶಿಡ್ಲಘಟ್ಟ ನಗರದ ಕೋಟೆ ವೃತ್ತದ ಸಮುದಾಯ ಭವನದಲ್ಲಿ ಶನಿವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ರಮೇಶ್ ಮಾತನಾಡಿದರು.

ಕೊರೊನಾ ಸಂದರ್ಭದಲ್ಲಿ ಹೆಚ್ಚು ಕಾರ್ಯಕ್ಷಮತೆಯಿಂದ ಸೇವೆ ಸಲ್ಲಿಸಿರುವ ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ, ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಬೇಕು. ಈ ಶಿಬಿರದಲ್ಲಿ ತಜ್ಞ ವೈದ್ಯರು ತಪಾಸಣೆ ನಡೆಸಿ ಅವರು ನೀಡುವ ಔಷಧಿಯನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

 ನಗರ ಆರೋಗ್ಯ ಕೇಂದ್ರದ ಡಾ.ಗುರು ಮಾತನಾಡಿ, ನಗರಸಭಾ ಸದಸ್ಯರ ಸಹಕಾರದಿಂದ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವವರ ಪ್ರಮಾಣ ಹೆಚ್ಚಿದೆ. ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಲೇಬೇಕು. ಕೋವಿಡ್ ನಿಂದ ಪಾರಾಗಲು ಅದೊಂದೇ ನಮ್ಮಲ್ಲಿರುವ ಅಸ್ತ್ರ ಎಂದರು.

ನಗರಸಭಾ ಉಪಾಧ್ಯಕ್ಷ ಅಫ್ಸರ್ ಪಾಷ, ಕಿರಿಯ ಆರೋಗ್ಯ ನಿರೀಕ್ಷಕಿ ಶೋಭಾ, ರಾಜೇಶ್, ವಿಜಯಕುಮಾರ್, ಸಹಾಯಕ ಎಂಜಿನಿಯರ್ ರಘುನಾಥ್, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಮುರಳಿ, ಡಾ.ಯಶ್ವಂತ್, ಮಂಗಳಾ, ಜೀವಿತಾ, ಕವಿತಾ ಮತ್ತು ಪೌರಕಾರ್ಮಿಕರು ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!