ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ, ಆಗಸ್ಟ್ 2 ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿತು. ಆದರೂ ಶಿಡ್ಲಘಟ್ಟದ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ಭಾನುವಾರ ಬಂದ್ ಮಾಡಲಾಗಿತ್ತು.
ಶಿಡ್ಲಘಟ್ಟದ ರೇಷ್ಮೆ ಗೂಡಿನ ಮಾರುಕಟ್ಟೆ ರಾಜ್ಯದಲ್ಲಿಯೇ ಅತಿದೊಡ್ಡದೆಂಬ ಖ್ಯಾತಿ ಪಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ನಂತರ ರೇಷ್ಮೆ ಬೆಳೆಗಾರರು ಹಾಗೂ ರೀಲರುಗಳ ಒತ್ತಾಯದ ಮೇಲೆ ಹಲವಾರು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಡ್ಲಘಟ್ಟದ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ತೆರೆಯಲಾಯಿತು. ಕಳೆದ ತಿಂಗಳು ಪ್ರತಿ ಭಾನುವಾರ ಲಾಕ್ ಡೌನ್ ಮಾಡುವ ಸರ್ಕಾರದ ನಿರ್ಧಾರದಂತೆ ರೇಷ್ಮೆ ಗೂಡಿನ ಮಾರುಕಟ್ಟೆಯನ್ನೂ ಸಹ ಮುಚ್ಚಲಾಗುತ್ತಿತ್ತು. ಈ ಹಿಂದೆಯೇ ನೀಡಿದ್ದ ಮಾಹಿತಿಯನ್ವಯ ಭಾನುವಾರ ಲಾಕ್ ಡೌನ್ ಅನ್ನು ರದ್ದುಗೊಳಿಸಿದ್ದರೂ ಗೂಡಿನ ಮಾರುಕಟ್ಟೆಯನ್ನು ಬಂದ್ ಮಾಡಿದ್ದರು.
“ನಾವು ಹಿಂದೆಯೇ ರೈತರು ಮತ್ತು ರೀಲರುಗಳಿಗೆ ತಿಳಿಸಿದ್ದೆವು. ಹಾಗಾಗಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ಭಾನುವಾರ ಮುಚ್ಚಿದ್ದೇವೆ. ಶನಿವಾರ ಕೇವಲ 250 ಲಾಟ್ ರೇಷ್ಮೆ ಗೂಡುಗಳು ಬಂದಿದ್ದವು. 30 ಟನ್ ಆವಕವಾಗಬೇಕಿದ್ದ ಕಡೆ ಸುಮಾರು 15 ಟನ್ ಆವಕವಾಗಿತ್ತಷ್ಟೆ. ಇನ್ನು ಹತ್ತು ದಿನಗಳು ಕಳೆದ ಮೇಲೆ ಹೆಚ್ಚಿನ ರೇಷ್ಮೆ ಗೂಡು ಬರುತ್ತವೆ. ಭಾನುವಾರ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ಮುಚ್ಚಿದ್ದರಿಂದ ಯಾರಿಗೂ ತೊಂದರೆಯಿಲ್ಲ. ರಾಜ್ಯದಲ್ಲಿ ಬೇರೆಡೆಯೂ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ಮುಚ್ಚಲಾಗಿದೆ” ಎಂದು ರೇಷ್ಮೆ ಗೂಡಿನ ಮಾರುಕಟ್ಟೆಯ ಉಪನಿರ್ದೇಶಕ ಸುಭಾಷ್ ಸಾತೇನಹಳ್ಳಿ ತಿಳಿಸಿದರು.
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi