ಜನ ಸೇವೆ ಮಾಡುವವರನ್ನು ಗ್ರಾಮ ಪಂಚಾಯಿತಿಗೆ ಆಯ್ಕೆ ಮಾಡಬೇಕು – ಶಾಸಕ ವಿ.ಮುನಿಯಪ್ಪ

Grama Panchayat elections Congress MLA Sidlaghatta V Muniyappa

ಜನಪರ ಸೇವೆ ಮಾಡುವಂತಹ ಉತ್ತಮರನ್ನು ಗ್ರಾಮ ಪಂಚಾಯಿತಿ ಚುನಾವಣೆಯ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡುವ ಮೂಲಕ ಚುನಾವಣೆ ನಡೆಸಲು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಕಾರ್ಯ ಪ್ರವೃತ್ತರಾಗಬೇಕು ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.

ತಾಲ್ಲೂಕಿನ ಹಂಡಿಗನಾಳದ ತಮ್ಮ ಸ್ವಗೃಹದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

ಪಕ್ಷದ ಬೆಂಬಲದಿಂದ ಗೆದ್ದು ಪಕ್ಷಾಂತರ ಮಾಡುವಂತಹವರಿಗೆ ಬೆಂಬಲಿಸದೇ ಪಕ್ಷದ ತತ್ವ ಸಿದ್ದಾಂತಗಳನ್ನಿಟ್ಟುಕೊಂಡಿರುವಂತಹ ಪ್ರಾಮಾಣಿಕರಿಗೆ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಈ ಹಿಂದೆ ನಗರಸಭೆ ಸೇರಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದಿಂದ ಗೆದ್ದಂತಹ ಸುಮಾರು ಜನ ಪಕ್ಷಾಂತರ ಮಾಡಿದ ನೋವಿದೆ. ಸಾಲದ್ದಕ್ಕೆ ಅನಾರೋಗ್ಯದ ನಡುವೆಯೂ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸುತ್ತಿದ್ದು, ಈಗಾಗಲೇ ಎಲ್ಲಾ ಗ್ರಾಮ ಪಂಚಾಯಿತಿ ಮುಖಂಡರೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುಬ್ರಮಣಿ, ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!